ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಮಹಿಳಾ ಮತ್ತು ಮಕ್ಕಳ ಶ್ರೇಯಾಭಿವೃದ್ಧಿ ಸಮಿತಿಯಿಂದ ಪುರಸಭಾ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು 2026 ಹೊಸ ವರ್ಷವನ್ನು ಸ್ವಾಗತಿಸಲಾಯಿತು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಮೇಶ ಟಿ.ಎಲ್. ಕಾರ್ಯಕ್ರಮ ಉದ್ಘಾಟಿಸಿ, ಶುಭ ಹಾರೈಸಿದರು.
ಈ ಸಂದರ್ಭದಲ್ಲಿ 2025 -26ನೇ ಸಾಲಿನ ಕಾರ್ಯಕ್ರಮದ ಬಗ್ಗೆ ಸಭೆಗೆ ಮಾಹಿತಿ ನೀಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷರಾದ ಗುಣರತ್ನ ವಹಿಸಿ, ಮಹಿಳಾ ಮತ್ತು ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ, ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಇಂದಿನ ವಿದ್ಯಮಾನಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಯೋಜನಾ ಕಛೇರಿಯ ಮೇಲ್ವಿಚಾರಕರು ಹಾಜರಿದ್ದರು.
ಕಾರ್ಯಕ್ರಮವನ್ನು ಸಮಿತಿಯ ಕಾರ್ಯದರ್ಶಿ ಉಷಾ ಕೆ. ನಿರೂಪಿಸಿ, ಲಲಿತಾ ವಂದಿಸಿದರು. ಸುಚಿತ್ರಾ ಪ್ರಾರ್ಥನೆಗೈದರು.











