ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಯೆನೆಪೋ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಗೆಳೆಯರ ಬಳಗ ಕಾರ್ಕಡ, ಸಾಲಿಗ್ರಾಮ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ, ಕಾರ್ಕಡ – ಸಾಲಿಗ್ರಾಮ ಇವರ ಸಂಯುಕ್ತ ಆಶ್ರಯದಲ್ಲಿ ಡಾ. ಕೋಟ ಶಿವರಾಮ ಕಾರಂತರ ಸ್ಮರಣಾರ್ಥ ಉಚಿತ ಆರೋಗ್ಯ ತಪಾಸಣಾ ಶಿಬಿರ ಜ. 04.ರ ಆದಿತ್ಯವಾರ ಬೆಳಿಗ್ಗೆ 9:00 ರಿಂದ ಮಧ್ಯಾಹ್ನ – 1.00 ಗಂಟೆಯವರೆಗೆ ಪ್ರಾಥಮಿಕ ಆರೋಗ್ಯ ಕೇಂದ್ರ, ಕಾರ್ಕಡ, ಸಾಲಿಗ್ರಾಮ ಇಲ್ಲಿ ಜರಗಲಿದೆ.
ಕಾರ್ಯಕ್ರಮವನ್ನು ಕೋಟ ವಿವೇಕ ವಿದ್ಯಾಸಂಸ್ಥೆಯ ನಿವೃತ್ತ ಪ್ರಾಂಶುಪಾಲರಾದ ಚಿತ್ರಾ ಕಾರಂತ, ಉದ್ಘಾಟಿಸಲಿದ್ದು,
ಅಧ್ಯಕ್ಷತೆಯನ್ನು ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ ವಹಿಸಲಿದ್ದಾರೆ.
ಶುಭಾಶಂಸನೆ : ಸಾಲಿಗ್ರಾಮ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಜಯಶೀಲಾ ಆಚಾರ್ಯ ,ಮುಖ್ಯ ಅತಿಥಿಗಳಾಗಿ ಯೆನೆಪೋಯ ವೈದ್ಯಕೀಯ ವಿದ್ಯಾಲಯ ದೇರಳಕಟ್ಟೆ ಇದರ ಕಿವಿ, ಮೂಗು, ಗಂಟಲು ವಿಭಾಗದ ಪ್ರಾಧ್ಯಾಪಕ ಡಾ.ಗಂಗಾಧರ ಸೋಮಯಾಜಿ ಕೆ.ಎಸ್, ಪ್ರಾಥಮಿಕ ಆರೋಗ್ಯ ಕೇಂದ್ರ, ಸಾಸ್ತಾನ ಇದರ ವೈದ್ಯಾಧಿಕಾರಿ ಡಾ. ರಾಘವೇಂದ್ರ ರಾವ್, ಹಾಗೂ ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ ದೇರಳಕಟ್ಟೆ ಮಂಗಳೂರು ಇಲ್ಲಿನ ಕೀಲು ಮೂಳೆ ಸ್ನಾಯು ಚಿಕಿತ್ಸಾ ವಿಭಾಗ ಮುಖ್ಯಸ್ಥ ಡಾ| ಜನಾರ್ದನ ಐತಾಳ, ಯೆನೆಪೋಯ ವೈದ್ಯಕೀಯ ಕಾಲೇಜು ವೈದ್ಯಕೀಯ ಸಹಾಯಕ ಅಧೀಕ್ಷಕ ಡಾ|.ನಾಗರಾಜ ಶೇಟ್ ಉಪಸ್ಥಿತರಿರಲಿದ್ದಾರೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ











