ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ತಲ್ಲೂರು ನೇರಳಕಟ್ಟೆ ರಸ್ತೆಯ ಶೆಟ್ರಕಟ್ಟೆಯಲ್ಲಿ ಕೆಎಸ್.ಆರ್.ಟಿಸಿ ಬಸ್ಸಿಗೆ ಮಣ್ಣು ತುಂಬಿದ ಟಿಪ್ಪರ್ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಬಸ್ಸಿನಲ್ಲಿದ್ದ ವಿದ್ಯಾರ್ಥಿಗಳು ಸೇರಿದಂತೆ ಹಲವಾರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ.
ಕುಂದಾಪುರದಿಂದ ಸಿದ್ದಾಪುರಕ್ಕೆ ಸಂಚರಿಸುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್ಸಿಗೆ ಶೆಟ್ರಕಟ್ಟೆ ತಿರುವಿನ ಬಳಿ ಎದುರಿನಿಂದ ಬಂದ ಟಿಪ್ಪರ್ ಬಸ್ಸಿನ ಚಾಲಕನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಶಾಲಾ ಕಾಲೇಜು ಬಿಡುವ ಸಮಯವಾದ್ದರಿಂದ ಬಸ್ಸಿನಲ್ಲಿ ಪ್ರಯಾಣಿಕರು ತುಂಬಿದ್ದು ಅಪಘಾತದ ರಭಸಕ್ಕೆ ಹಲವಾರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ.
ಕೂಡಲೇ ಸ್ಥಳೀಯರು ಗಾಯಾಳುಗಳನ್ನು ಅಸ್ಪತ್ರೆಗೆ ಸಾಗಿಸಿದರು.
ಟಿಪ್ಪರ್ ಚಾಲಕನ ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











