ಬೆಳಗಾವಿ :ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

0
480

Click Here

Click Here

ನೆರಳಕಟ್ಟೆಯ ಶೆಟ್ರಕಟ್ಟೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದ ವಿವರಣೆ ಪಡೆದ ಸಚಿವರು

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತಲ್ಲೂರು, ನೆರಳಕಟ್ಟೆಯ ಶೆಟ್ರಕಟ್ಟೆ ಪೆಟ್ರೋಲ್ ಬಂಕ್ ಬಳಿ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವವರಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದ್ದಾರೆ.

Click Here

ಬಹುತೇಕ ಕಾಲೇಜು ವಿದ್ಯಾರ್ಥಿಗಳೇ ಪ್ರಯಾಣಿಸುತ್ತಿದ್ದ ಬಸ್ ಅಪಘಾತದ ವಿಷಯ ತಿಳಿದು ಆಘಾತವಾಯಿತು. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗುವುದು. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ, ಈ ವೇಳೆ ಕುಟುಂಬ ಸದಸ್ಯರು ಧೈರ್ಯದಿಂದ ಇರಬೇಕು ಎಂದು ಸಚಿವರು ವಿನಂತಿಸಿದ್ದಾರೆ.

ಘಟನೆ ಕುರಿತು ಅಧಿಕಾರಿಗಳಿಂದ ನಿರಂತರ ಮಾಹಿತಿ ಪಡೆಯುತ್ತಿರುವೆ. ಯಾರೂ ಆತಂಕಗೊಳ್ಳುವುದು ಬೇಡ ಎಂದು ಸಚಿವರು ತಿಳಿಸಿದ್ದಾರೆ.

Click Here

LEAVE A REPLY

Please enter your comment!
Please enter your name here