ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಕುಂದಾಪುರದ ಸರಕಾರಿ, ಖಾಸಗಿ ಆಸ್ಪತ್ರೆಗಳಿಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಭೇಟಿ ನೀಡಿ ಗಾಯಾಳುಗಳ ಯೋಗ ಕ್ಷೇಮ ವಿಚಾರಿಸಿದರು. ಇನ್ನು ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ| ಪ್ರೇಮಾನಂದ್, ಕಾಂಗ್ರೆಸ್ ಮುಖಂಡ ದಿನೇಶ್ ಹೆಗ್ಡೆ ಮೊಳಹಳ್ಳಿ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಶೆಟ್ಟಿ ಮತ್ತಿತರರು ಭೇಟಿ ನೀಡಿದರು.











