ಕುಂದಾಪುರ ಮಿರರ್ ಸುದ್ದಿ….

ಕುಂದಾಪುರ: ಕುಂದಾಪುರ ಬಿಜೆಪಿ ಮತ್ತು ಶಾಸಕರು ಹಾಗೂ ಆಪ್ತ ಸಹಾಯಕರ ಬಗ್ಗೆ ಅವಹೇಳನಕಾರಿಯಾಗಿ ವಾಟ್ಸಪ್ ಗ್ರೂಪ್ ಮತ್ತು ಸಾಮಾಜಿಕ ಜಾಲತಾಣದಲ್ಲಿ ಸಂದೇಶಗಳನ್ನು ಕಳುಹಿಸಿ ಸಾರ್ವಜನಿಕ ಶಾಂತಿ ಭಂಗಕ್ಕೆ ಕಾರಣವಾಗುತ್ತಿರುವ ಸಚಿನ್ ಬಸ್ರೂರು ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಕುಂದಾಪುರ ನಗರ ಠಾಣೆಗೆ ದೂರು ನೀಡಲಾಯಿತು.
ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ ಹಾಗೂ ಬಿಜೆಪಿಯ ಪ್ರಮುಖರೊಂದಿಗೆ ಆಧಾರ ರಹಿತವಾಗಿ ವಾಟ್ಸಾಪ್ ಗ್ರೂಪ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳನ್ನು ಕಳುಹಿಸಿ ಸಾರ್ವಜನಿಕ ಶಾಂತಿ ಭಂಗಕ್ಕೆ ಕಾರಣವಾಗಲು ಸಂಚನ್ನು ರೂಪಿಸುತ್ತಿರುವ ಸಚಿನ್ ಬಸ್ರೂರು ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಕುಂದಾಪುರ ನಗರ ಠಾಣೆಗೆ ಭೇಟಿ ನೀಡಿ ಕುಂದಾಪುರ ವೃತ್ತ ನಿರೀಕ್ಷಕರಾದ ಜಯರಾಂ ಗೌಡ ಇವರ ಮೂಲಕ ಉಪ ಪೊಲೀಸ್ ಅಧೀಕ್ಷಕರಿಗೆ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ.ಎಸ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸುರೇಶ್ ಶೆಟ್ಟಿ ಕಾಡೂರು, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಕುಂದಾಪುರ ಮಂಡಲ ಉಪಾಧ್ಯಕ್ಷರಾದ ಸುನೀಲ್ ಶೆಟ್ಟಿ ಹೇರಿಕುದ್ರು,ರೂಪಾ ಬಾಬು ಪೈ, ಕುಂದಾಪುರ ಮಂಡಲ ಯುವ ಮೋರ್ಚಾ ಅಧ್ಯಕ್ಷ ಕಿರಣ್ ಪೂಜಾರಿ ತೆಕ್ಕಟ್ಟೆ, ಓಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಕಾಂಚನ್ ಸಂಗಮ್, ಎಸ್ಸಿ ಮೋರ್ಚಾ ಅಧ್ಯಕ್ಷ ಮಂಜುನಾಥ್ ಬಳ್ಕೂರು, ರೈತ ಮೋರ್ಚಾ ಅಧ್ಯಕ್ಷ ಜಯಶೀಲ ಶೆಟ್ಟಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಸೌರಭಿ ಪೈ, ಪುರಸಭಾ ಮಾಜಿ ಸದಸ್ಯರಾದ ಸಂತೋಷ್ ಶೆಟ್ಟಿ, ಪ್ರಭಾಕರ ವಿ, ನಗರ ಮಹಾಶಕ್ತಿ ಕೇಂದ್ರ ಅಧ್ಯಕ್ಷ ರಾಜೇಶ್ ಕಡ್ಗಿ, ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಪ್ರಸಾದ್ ಬಿಲ್ಲವ, ಕುಂದಾಪುರ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಚೇತನ್ ಖಾರ್ವಿ, ಸಂಪತ್ ಶೇರಿಗಾರ್, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಭಾಸ್ಕರ್ ಬಿಲ್ಲವ, ಪಕ್ಷದ ಮುಖಂಡರಾದ ಸಂಪತ್ ಕುಮಾರ್ ಶೆಟ್ಟಿ ಶಾನಾಡಿ, ದಿವಾಕರ ಕಡ್ಗಿ, ಜಯಂದ್ರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.











