ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಕೋಟದ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲದಲ್ಲಿ ವಾರ್ಷಿಕ ವರ್ಧತ್ಯೋತ್ಸವದ ಪ್ರಯುಕ್ತ ವೇ.ಮೂ ಮಧುಸೂದನ್ ಬಾಯರಿ ನೇತೃತ್ವದಲ್ಲಿ ಶುಕ್ರವಾರ ಪ್ರಾರ್ಥನಾ ಫಲನ್ಯಾಸ ಪೂರ್ವಕ ಸಾಮೂಹಿಕ ಪ್ರಾರ್ಥನೆ, ಶ್ರೀ ಅಮೃತೇಶ್ವರೀ ಹಲವು ಮಕ್ಕಳ ತಾಯಿಗೆ ಪಂಚ ವಿಂಶತಿ ದ್ರವ್ಯಕಲಶ ಪೂರ್ವಕ ಕಲಾತತ್ವ ಹೋಮ ಹಾಗೂ ಪರಿವಾರ ದೇವರುಗಳಿಗೆ ನವಕ ಪ್ರಧಾನ ಕಾಲಾಧಿವಾಸ ಹೋಮ ಇತ್ಯಾಧಿ ಪೂಜಾ ಕಾರ್ಯಕ್ರಮಗಳು ಜರಗಿದವು.
ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ ಕುಂದರ್ ಧಾರ್ಮಿಕ ವಿಧಿ ವಿಧಾನಗಳಲ್ಲಿ ಪ್ರಮುಖರಾಗಿ ಭಾಗವಹಿಸಿದರು.
ದೇಗುಲದ ಟ್ರಸ್ಟಿಗಳಾದ ಸುಭಾಷ್ ಶೆಟ್ಟಿ,ಗಣೇಶ್ ನೆಲ್ಲಿಬೆಟ್ಟು, ರತನ್ ಐತಾಳ್, ಸುಬ್ರಾಯ ಜೋಗಿ, ಸುಧಾ ಎ ಪೂಜಾರಿ, ಜ್ಯೋತಿ ಡಿ. ಕಾಂಚನ್, ಶಿವ ಪೂಜಾರಿ, ಚಂದ್ರಶೇಖರ ಆಚಾರ್, ದೇಗಯಲದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಇದ್ದರು.











