ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಪ್ರಥಮ ಬಾರಿಗೆ ಭೇಟಿ ನೀಡಿದ ಪರ್ಯಾಯ ಪೀಠವನ್ನು ಏರಲಿರುವ ಶಿರೂರು ಮಠದ ಯತಿಗಳಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದಂಗಳವರಿಗೆ ಬಿಕ್ಷಾ ಕಾರ್ಯಕ್ರಮವನ್ನು ಶ್ರೀದೇವಳದ ವತಿಯಿಂದ ಹಮ್ಮಿಕೊಳ್ಳಲಾಯಿತು.
ಶ್ರೀ ಪಾದಂಗಳವರನ್ನು ಪೂರ್ಣಕುಂಭ ಹಾಗೂ ವಾದ್ಯಗೋಷ್ಠಿಗಳೊಂದಿಗೆ ಸ್ವಾಗತಿಸಲಾಯಿತು.
ಶ್ರೀ ಶ್ರೀ ಪಾದಂಗಳವರು ಪಟ್ಟದ ದೇವರ ಪೂಜೆಯನ್ನು ನೆರವೇರಿಸಿ, ವಿಶೇಷ ಪ್ರವಚನವನ್ನು ನೀಡಿ ಭಿಕ್ಷೆಯನ್ನು ಸ್ವೀಕರಿಸಿ ಮುಂದೆ ನಡೆಯುವ ಪರ್ಯಾಯ ಮಹೋತ್ಸವಕ್ಕೆ ವಿಶೇಷ ಆಹ್ವಾನದ ರಾಯಸವನ್ನು ನೀಡಿದರು.
ಈ ಸಂದರ್ಭದಲ್ಲಿ ಆಡಳಿತ ಧರ್ಮದರ್ಶಿಗಳಾದ ಕೆ. ಶ್ರೀ ರಮಣ ಉಪಾಧ್ಯಾಯ ದಂಪತಿಗಳು ಶ್ರೀಗಳನ್ನು ಸ್ವಾಗತಿಸಿ ಪಾದಪ್ರಕ್ಷಾಲನ ಮಾಡಿ ಮಾಲಿಕೆ ಮಂಗಳಾರತಿಯೊಂದಿಗೆ ಫಲ ಕಾಣಿಕೆಯನ್ನು ಸಮರ್ಪಿಸಿ ಅನುಗ್ರಹ ಮಂತ್ರಾಕ್ಷತೆಯನ್ನು ಪಡೆದರು.
ಈ ಸಂದರ್ಭದಲ್ಲಿ ವಿಶ್ರಾಂತ ಧರ್ಮದರ್ಶಿಗಳಾದ ಕೆ ಸೂರ್ಯನಾರಾಯಣ ಉಪಾಧ್ಯಾಯರು, ಪರ್ಯಾಯ ಅರ್ಚಕರಾದ ಕೆ ವ್ಯಾಸ ಉಪಾಧ್ಯಾಯ ಹಾಗೂ ಸಹೋದರರು ಆನೆಗುಡ್ಡೆ ಉಪಾಧ್ಯಾಯ ಕುಟುಂಬ ಸದಸ್ಯರು, ದೇವಳದ ಆಡಳಿತ ಹಾಗೂ ಅರ್ಚಕ ಸಿಬ್ಬಂದಿಗಳು ಉಪಸ್ಥಿತರಿದ್ದರು.











