ಕೋಟ :ಹಿಂದೂಗಳು ಸಂಘಟಿತರಾಗದಿದ್ದರೆ ಭವಿಷ್ಯದಲ್ಲಿ ಆಪತ್ತು- ಕವಿತಾ ಆಚಾರ್ಯ ಮುದೂರು

0
67

Click Here

Click Here

ಕೋಟದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಹಿಂದೂಗಳು ಮೈಮರೆತು ಸಂಘಟಿತರಾಗದಿದ್ದರೆ ಭವಿಷ್ಯದಲ್ಲಿ ಆಪತ್ತು ಕಟ್ಟಿಟ್ಟ ಬುತ್ತಿ. ಆದ್ದರಿಂದ ನಮ್ಮಯುವ ಪೀಳಿಗೆಗೆ ಸಂಸ್ಕೃತಿ, ಸಂಸ್ಕಾರದ ಕುರಿತು ತಿಳುವಳಿಕೆ ಮೂಡಿಸಬೇಕು ಎಂದು ವಾಗ್ಮಿ ಕವಿತಾ ಆಚಾರ್ಯ ಮುದೂರು ತಿಳಿಸಿದರು.

Click Here

ಅವರು ಜ.25 ರಂದು ಕೋಟದಲ್ಲಿ ನಡೆದ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದರು.
ಹಿಂದೂ ಸಂಸ್ಕೃತಿಗೆ ಸಾವಿರಾರು ವರ್ಷದ ಇತಿಹಾಸ ಇದೆ ಹಾಗೂ ತನ್ನದೇ ಆದ ವೈಶಿಷ್ಟ್ಯವಿದೆ. ನಾವು ನಮ್ಮ ಧಾರ್ಮಿಕ ನೆಲಗಟ್ಟನ್ನು ಮರೆತರೆ ನಮ್ಮ ಮೇಲೆ ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ದಾಳಿ ಖಂಡಿತ ಎಂದರು.
ಹಿಂದೂ ಸಂಘಟನೆಯ ಪ್ರಮುಖರಾದ ಉದ್ಯಮಿ ಬೆಳ್ವೆ ಗಣೇಶ್ ಕಿಣಿ ಭೌದ್ಧಿಕ ವಿಚಾರದ ಕುರಿತು ಮಾತನಾಡಿ, ಹಿಂದೂಗಳಲ್ಲಿ ಒಗ್ಗಟ್ಟು ಮೂಡಿಸಲು ಹಾಗೂ ಸಂಘಟನೆ ಬಲಪಡಿಸುವ ಸಲುವಾಗಿ ಈ ಸಮಾವೇಶ ದೇಶದಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದರು.

ಕೋಟ ಹಿರೇಮಹಾಲಿಂಗಶ್ವರ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಆನಂತಪದ್ಮನಾಭ ಐತಾಳ, ಮಣೂರು ಮಹಾಲಿಂಗೇಶ್ವರ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ್ ಕುಂದರ್, ಉದ್ಯಮಿ ಪ್ರಶಾಂತ್ ಕುಂದರ್ ಇದ್ದರು.
ಸಮಾವೇಶಕ್ಕೆ ಮೊದಲು ಪಾದಯಾತ್ರೆ ನೆರವೇರಿತು.

ಸಂಘಟನೆಯ ಪ್ರಸಾದ್ ಬಿಲ್ಲವ ಸ್ವಾಗತಿಸಿ, ರಂಜಿತ್ ಬಾರಿಕೆರೆ ಕಾರ್ಯಕ್ರಮ ನಿರೂಪಿಸಿದರು.

Click Here

LEAVE A REPLY

Please enter your comment!
Please enter your name here