ಕುಂದಾಪುರ ಮಿರರ್ ಸುದ್ದಿ…
ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಇದರ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಸ್ನೇಹಕೂಟ ಮಣೂರು ಇವರುಗಳ ಸಂಯುಕ್ತ ಸಹಯೋಗದೊಂದಿಗೆ ಪ್ರತಿ ತಿಂಗಳು ಸಾಧಕ ಕೃಷಿಕನನ್ನು ಗುರುತಿಸುವ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮ ನಡಿಗೆ ಮಾಲಿಕೆಗೆ ಇದೀಗ 51ರ ಸರಣಿಯ ಕಾರ್ಯಕ್ರಮದ ಅಂಗವಾಗಿ ಸಾಧಕ ಕೃಷಿಕರ ಮನೆಯಂಗಳಕ್ಕೆ ತೆರಳಿ ಕೃಷಿ ಪರಿಕರವನ್ನು ನೀಡಿ ಗೌರವಿಸುವ ಕಾರ್ಯ ಇದೇ ಜ.27ರ ಮಂಗಳವಾರ ಅಪರಾಹ್ನ 4.30ಕ್ಕೆ ನಡೆಯಲಿದೆ.
ಕೃಷಿ ಕ್ಷೇತ್ರದ ಹಿರಿಯ ಸಾಧಕಿ 90ರ ಇಳಿ ವಯಸ್ಸಿನ. ಕಾರ್ತಟ್ಟು ಹುಣ್ಸೆಬೆಟ್ಟು ಲಕ್ಷ್ಮೀ ಮರಕಾಲ್ತಿ ಕೃಷಿ ಪುರಸ್ಕಾರ ಅವರನ್ನು ಗೌರವಿಸುವ ಕಾರ್ಯಕ್ರಮ ಜರಗಲಿದೆ ಎಂದು ಸಂಘದ ಅಧ್ಯಕ್ಷ ಮನೋಹರ್ ಪೂಜಾರಿ, ಸ್ಥಾಪಕಾಧ್ಯಕ್ಷ ಸುರೇಶ್ ಗಾಣಿಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











