ಕಾಳಾವರ ನೇತಾಜಿ ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ – ಸಾಧಕರಿಗೆ ಪುರಸ್ಕಾರ

0
395

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ನೇತಾಜಿ ಸರಕಾರಿ ಪ್ರೌಢಶಾಲೆ ಕಾಳಾವರದಲ್ಲಿ 77 ನೇ ಗಣರಾಜ್ಯೋತ್ಸವ ಆಚರಣೆಯು ಸಂಭ್ರಮದಿಂದ ಜರಗಿತು.

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಸತೀಶ್ ಜೋಗಿಯವರು ಧ್ವಜಾರೋಹಣ ಗೈದರು.
ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಳಾವರ ಗ್ರಾಮ ಪಂಚಾಯಿತಿಯ ಅಧ್ಯಕ್ಷ ರಾದ ಮಂಜುನಾಥ್ ಶೆಟ್ಟಿಗಾರ್ ವಹಿಸಿದ್ದರು.

Click Here

2024-25 ನೇ ಸಾಲಿನ ಎಸ್ ಎಸ್ ಎಲ್ ಸಿ ಸಾಧಕ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಫಲಕ, ದತ್ತಿನಿಧಿ, ಹಾಗೂ ವಿಷಯವಾರು ಶಿಕ್ಷಕರಿಂದ ನೀಡಲ್ಪಡುವ ನಗದು ಪುರಸ್ಕಾರವನ್ನು ವಿತರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಸತೀಶ್ ಜೋಗಿ, ಗ್ರಾಮ ಪಂಚಾಯಿತಿಯ ಸದಸ್ಯರಾದ ಜಯಪ್ರಕಾಶ್ ಶೆಟ್ಟಿ ನೇತಾಜಿ ಯುವಕ ಮಂಡಲದ ಅಧ್ಯಕ್ಷರು, ಕೋಟೇಶ್ವರ ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕರಾದ ಭರತ್ ಕುಮಾರ್ ಶೆಟ್ಟಿ, ಸಮೂಹ ಸಂಪನ್ಮೂಲ ವ್ಯಕ್ತಿ ಸಲ್ಮಾ ಅವರು ಸಾಧಕ ವಿದ್ಯಾರ್ಥಿಗಳಿಗೆ ಪುರಸ್ಕಾರವನ್ನು ನೀಡಿ ಗಣರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿ, ಶಾಲೆಯ ಸಾಧನೆಯನ್ನು ಪ್ರಶಂಸಿಸಿದರು. 2025 ರ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ನಾಲ್ಕನೇ ರಾಂಕ್ ಪಡೆದು ಜಿಲ್ಲಾಮಟ್ಟದ ನಗದು ಪುರಸ್ಕಾರಕ್ಕೆ ಆಯ್ಕೆಯಾದ ವಿದ್ಯಾರ್ಥಿ ನೂರ್ ಮಾಝಿನ್ ಅವರನ್ನು ಅಭಿನಂದಿಸಲಾಯಿತು

ಎಸ್ ಎಸ್ ಎಲ್ ಸಿ ಸಾಧಕರ ವಿವರವನ್ನು ಸಮಾಜ ವಿಜ್ಞಾನ ಶಿಕ್ಷಕರಾದ ಮಹಾಬಲೇಶ್ವರ್ ಚಿ ಭಾಗ್ವತ್, ವನಸಿರಿ ಪರಿಸರ ಸಂಘದ ವತಿಯಿಂದ ನಡೆಸಿದ ಸ್ಪರ್ಧಾ ವಿಜೇತರ ವಿವರವನ್ನು ವಿಜ್ಞಾನ ಶಿಕ್ಷಕಿ ಪ್ರತಿಭಾ ಹಾಗೂ ಈ ಬಾರಿಯ ಪ್ರಥಮ ಪೂರ್ವ ಸಿದ್ಧತಾ ಪರೀಕ್ಷೆಯ ಸಾಧಕ ವಿದ್ಯಾರ್ಥಿಗಳ ವಿವರವನ್ನು ಗಣಿತ ಶಿಕ್ಷಕರಾದ ಗಣೇಶ್ ಶೆಟ್ಟಿಗಾರ್ ಅವರು ಮಂಡಿಸಿದರು.

ಪ್ರಭಾರ ಮುಖ್ಯ ಶಿಕ್ಷಕರಾದ ಗಣೇಶ ಶೆಟ್ಟಿಗಾರ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಶಿಕ್ಷಕ ರವಿರಾಜ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Click Here

LEAVE A REPLY

Please enter your comment!
Please enter your name here