ಮಾಜಿ ಶಾಸಕರೂ ಹಿರಿಯ ನಾಯಕರಾದ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

0
258

Click Here

Click Here

ರಾಘವೇಂದ್ರ ಅಡಿಗ ಎಚ್ಚೆನ್.

Click Here

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಮಾಜಿ ಶಾಸಕ ರಾಜಕೀಯ, ಧಾರ್ಮಿಕ, ಸಹಕಾರ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಹಿರಿಯ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಶನಿವಾರ ಅವರು ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಅವರು ಕೊನೆಯುಸಿರೆಳೆದರು.
1983-1985 ಅವಧಿಯಲ್ಲಿ ಜನತಾ ಪಕ್ಷದಿಂದ ಬೈಂದೂರು ಕ್ಷೇತ್ರದ ಶಾಸಕರಾಗಿದ್ದ ಅಪ್ಪಣ್ಣ ಹೆಗ್ಡೆ ಅವರು ರಾಜಕೀಯ ಜೀವನದಲ್ಲಿ ಜನಸಾಮಾನ್ಯರ ಸಮಸ್ಯೆಗಳಿಗೆ ಧ್ವನಿಯಾಗಿದ್ದು, ಜನಪ್ರತಿನಿಧಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದರು. ಶಾಸಕರಾಗಿ ಕಾರ್ಯನಿರ್ವಹಿಸಿದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದರು.
ಧಾರ್ಮಿಕ ಕ್ಷೇತ್ರದಲ್ಲಿಯೂ ಅವರ ಸೇವೆ ಗಣನೀಯವಾಗಿದ್ದು, ಅನೇಕ ದೇವಾಲಯಗಳ ಅಭಿವೃದ್ಧಿ, ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆ ಹಾಗೂ ಸಂರಕ್ಷಣೆಗೆ ಅವರು ಮುನ್ನಡೆ ನೀಡಿದ್ದರು. ಅಜಾತ ಶತ್ರು, ಧಾರ್ಮಿಕ ನಾಯಕರು, ಹಿರಿಯ ರಾಜಕೀಯ ಮುತ್ಸದ್ದಿ, ಮಾಲಿಂಗೇಶ್ವರ ದೇವಸ್ಥಾನ ಬಸ್ರೂರು ಇದರ ಅಡಳಿತ ಧರ್ಮದರ್ಶಿ, ಶ್ರೀ ಕೊಲ್ಲೂರು ಮೂಕಾಂಬಿಕ ದೇವಸ್ಥಾನದ ಮಾಜಿ ಧರ್ಮದರ್ಶಿ, ಬೈಂದೂರು ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕರು,
ವಿವಿಧ ಸಹಕಾರಿ ಮತ್ತು ಕೃಷಿ ಕ್ಷೇತ್ರದಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನದ ಮೂಲಕ ಹಲವಾರು ಸಮಾಜಮುಖಿ ಕೆಲಸ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಇವರು ನಿಧನಕ್ಕೆ ಗಣ್ಯರು ಸಾರ್ವಜನಿಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Click Here

LEAVE A REPLY

Please enter your comment!
Please enter your name here