ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಕಿರಣ್ಸ್ ಡ್ರಾಗನ್ ಫಸ್ಟ್ ಮಾರ್ಷಲ್ ಆರ್ಟ್ಸ್ ಆಫ್ ಇಂಡಿಯಾ ವತಿಯಿಂದ ಫೆಬ್ರವರಿ 8, 2026 ರಂದು ಕುಂದಾಪುರದ ಜೂನಿಯರ್ ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ಇಂಟರ್ ಡೋಜೋ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಅಂಪಾರಿನ ಸಂಜಯ ಗಾಂಧಿ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.
ಕುಮಿಟೆ ವಿವಿಧ ವಿಭಾಗಗಳಲ್ಲಿ ನಡೆದ ಸ್ಪರ್ಧೆಗಳಲ್ಲಿ ಶಾಲೆಯ 16 ವಿದ್ಯಾರ್ಥಿಗಳು ಪ್ರಶಸ್ತಿಗಳನ್ನು ಗೆದ್ದು ಶಾಲೆಯ ಕೀರ್ತಿಯನ್ನು ರಾಜ್ಯ ಮಟ್ಟದಲ್ಲಿ ಎತ್ತಿಹಿಡಿದಿದ್ದಾರೆ. ತರಬೇತುದಾರ ಅಬ್ಜಲ್ ಯೂಸಫ್ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಈ ಸಾಧನೆ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಸಂಜಯ ಗಾಂಧಿ ಚಾರಿಟೆಬಲ್ ಟ್ರಸ್ಟ್ ಅಂಪಾರು ಇಲ್ಲಿನ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ ಹಾಗೂ ಕಾರ್ಯದರ್ಶಿ ಮತ್ತು ಎಲ್ಲಾ ನಿರ್ದೇಶಕರು , ಶಾಲೆಯ ಆಡಳಿತಾಧಿಕಾರಿ ಚೈತ್ರಾ ಯಡಿಯಾಳ ಮತ್ತು ಎಲ್ಲಾ ಶಿಕ್ಷಕ – ಶಿಕ್ಷಕಿಯರು, ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಶಸ್ತಿಗಳನ್ನು ಗೆದ್ದು ಹೆಚ್ಚಿನ ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದರು.











