ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ವಂಡ್ಸೆ ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಸದಸ್ಯರಾದ ಸುಶೀಲ ಅವರು ಶನಿವಾರದಂದು ಬೈಂದೂರು ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿಯವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ ಕುಮಾರ್ ಶೆಟ್ಟಿ, ವಂಡ್ಸೆ ಗ್ರಾ. ಪಂ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಶರತ್ ಕುಮಾರ್ ಶೆಟ್ಟಿ, ಉದಯ ಪೂಜಾರಿ ಚಿತ್ತೂರು, ಗೋವರ್ಧನ ಜೋಗಿ, ಶ್ರೀನಿವಾಸ್ ಪೂಜಾರಿ, ಗುಂಡು ಪೂಜಾರಿ, ಶರವಣ್ ಶೆಟ್ಟಿ, ಹರ್ಷ ಶೆಟ್ಟಿ, ಗ್ರಾ ಪಂ ಸದಸ್ಯೆ ಶ್ರೀಮತಿ, ಸುಬ್ಬ ವಂಡ್ಸೆ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.











