ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಮಹತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ವೈಯಕ್ತಿಕ ಕಾಮಗಾರಿಗಳಿಗೆ ಅವಕಾಶವಿರುವುದರಿಂದ ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆಯಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಸೃಷ್ಟಿಸುವ ಈ ಯೋಜನೆಯನ್ನು ಸರಕಾರ ಅನುಷ್ಟಾನಗೊಳಿಸಿದೆ. ಬಡಜನರ ಬದುಕನ್ನು ಹಸನಾಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ಕೊರ್ಗಿ ಗ್ರಾಮ ಪಂಚಾಯತ್ ಅಧ್ಯಕ್ಷ ಗೌರೀಶ್ ಹೆಗ್ಡೆ ಹೇಳಿದರು.
ಅವರು ಕೊರ್ಗಿ ಗ್ರಾಮ ಪಂಚಾಯತ್‍ನ ಸಭಾಂಗಣದಲ್ಲಿ ಜರುಗಿದ 2022-2023ನೇ ಸಾಲಿನ ಮಹತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿ ಗುಚ್ಚ ತಯಾರಿಕೆಯ ವಿಶೇಷ ಗ್ರಾಮಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಹತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆ ತಾಂತ್ರಿಕ ಸಲಹೆಗಾರ ಸದಾಶಿವ ಕೆ., ಐಇಸಿ ಸಲಹೆಗಾರ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಸವಿತಾ ಶೆಟ್ಟಿ, ವಿಕಲಚೇತನ ಮತ್ತು ಸಬಲೀಕರಣ ಇಲಾಖೆಯ ಸಂಯೋಜಕ ಕೃಷ್ಣ ಪೂಜಾರಿ, ವಿವಿಧ ಇಲಾಖೆ ಅಧಿಕಾರಿಗಳು ಗ್ರಾಮಸಭೆಗೆ ಮಾಹಿತಿ ನೀಡಿದರು.
ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಬೇಬಿ, ಸರ್ವ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು. ಪಂಚಾಯತ್ ಸಿಬ್ಬಂದಿಗಳಾದ ನಾಗರತ್ನ, ಕೇಶವ ಜೋಗಿ, ಶಶಿಕುಮಾರ, ಗಣೇಶ, ಶಾರದಾ ಸಹಕರಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾಕರ ಶೆಟ್ಟಿ ಗುಡ್ಡಾಮ್ಮಾಡಿ ಕಾರ್ಯಕ್ರಮ ನಿರ್ವಹಿಸಿದರು. ರಾಘವೇಂದ್ರ ಶೆಟ್ಟಿ ಹೆಸ್ಕತ್ತೂರು ವಂದಿಸಿದರು.











