ಅಂಪಾರು ಸಹಕಾರಿ ವ್ಯವಸಾಯಿಕ ಸಂಘದ ನೂತನ ಕಟ್ಟಡ ‘ರೈತಸೌಧ’ ಉದ್ಘಾಟನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

0
151

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕುಂದಾಪುರ: ಅಂಪಾರು ಸಹಕಾರಿ ವ್ಯವಸಾಯಿಕ ಸಂಘ ನಿ., ಅಂಪಾರು ಇದರ ನೂತನ ಕಟ್ಟಡ ರೈತಸೌಧ ಉದ್ಘಾಟನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಫೆ.20ರಂದು ಸಂಘದ ಕಛೇರಿಯಲ್ಲಿ ನಡೆಯಿತು.
ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಸಂಘದ ಅಧ್ಯಕ್ಷರಾದ ಪ್ರದೀಪ ಕುಮಾರ್ ಶೆಟ್ಟಿ ಗುಡಿಬೆಟ್ಟು ಮಾತನಾಡಿ, ಅಂಪಾರು ಸಹಕಾರಿ ವ್ಯವಸಾಯಿಕ ಸಂಘ ಸದಸ್ಯರ ಸಹಕಾರದಿಂದ ಪ್ರಗತಿಯ ಪಥದಲ್ಲಿ ಮುನ್ನೆಡೆಯುತ್ತಿದೆ. ಕಾರ್ಯಕ್ಷೇತ್ರದ ವ್ಯಾಪ್ತಿಯ ಸದಸ್ಯರಿಗೆ ಅಗತ್ಯ ಸೇವೆ, ಸವಲತ್ತುಗಳನ್ನು ಸಹಕಾರ ವ್ಯವಸ್ಥೆಯಡಿ ಒದಗಿಸಿಕೊಡುವ ಪ್ರಾಮಾಣಿಕ ಕೆಲಸವನ್ನು ಸಂಘ ಮಾಡುತ್ತಾ ಬಂದಿದೆ. ಸಂಘದ ಸದಸ್ಯರಿಗೆ ಇನ್ನಷ್ಟು ಸೇವೆ ನೀಡುವ ಉದ್ದೇಶದಿಂದ ಸುಸಜ್ಜಿತವಾದ ಕಟ್ಟಡ ರೈತ ಸೌಧವನ್ನು ನಿರ್ಮಾಣ ಮಾಡಲಾಗಿದ್ದು, ಮಾರ್ಚ್ 14-2026 ಶನಿವಾರ ಬೆಳಿಗ್ಗೆ 10-30ಕ್ಕೆ ಉದ್ಘಾಟನೆ ನಡೆಯಲಿದೆ ಎಂದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ನವೀನ್ ಕುಮಾರ್ ಶೆಟ್ಟಿ ಶಾನ್ಕಟ್ಟು, ನಿರ್ದೇಶಕರಾದ ಮೋಹನ ವೈದ್ಯ, ಕಿರಣ್ ಹೆಗ್ಡೆ, ಅರುಣ್ ಕುಮಾರ್ ಶೆಟ್ಟಿ, ಮನೋಹರ ಶೆಟ್ಟಿ, ಜಯರಾಮ ಶೆಟ್ಟಿ, ಉಮೇಶ ಕೊಠಾರಿ, ಅಜಿತ್ ಕುಮಾರ್, ಶ್ರೀಮತಿ ಜ್ಯೋತಿ ಉದಯಕುಮಾರ್ ಶೆಟ್ಟಿ, ಶ್ರೀಮತಿ ಭಾರತಿ ಬಾಲಕೃಷ್ಣ ಶೇಟ್, ಮಂಜುನಾಥ ನಾಯ್ಕ್, ಸುನಿಲ್, ವಲಯ ಮೇಲ್ವಿಚಾರಕ ಚಂದ್ರಶೇಖರ ಶೆಟ್ಟಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಸ್ವಾಗತಿಸಿ, ವಂದಿಸಿದರು.

Click Here

LEAVE A REPLY

Please enter your comment!
Please enter your name here