ಅಂಪಾರು :ಸಂಜಯ ಗಾಂಧಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

0
863

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕುಂದಾಪುರ :ಸಂಜಯ ಗಾಂಧಿ ಇಂಗ್ಲಿಷ್ ಮೀಡಿಯಂ ಶಾಲೆ ಅಂಪಾರು, ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ ಅಂಪಾರು ಇವರ ಆಶ್ರಯದಲ್ಲಿ ಫೆಬ್ರವರಿ 28ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ವಿಜ್ಞಾನ ಮಾದರಿಗಳ ಪ್ರದರ್ಶನವನ್ನು ಅತ್ಯಂತ ವಿಜೃಂಭಣೆಯಿಂದ ಆಯೋಜಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ಉದ್ಘಾಟಕರಾಗಿ ಬೈಂದೂರಿನ ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ ಅವರು ಭಾಗವಹಿಸಿ, ವಿವಿಧ ವೈಜ್ಞಾನಿಕ ಪ್ರಯೋಗಗಳ ಮೂಲಕ ಪ್ರದರ್ಶನವನ್ನು ಉದ್ಘಾಟಿಸಿ , ಪ್ರತಿಯೊಂದು ಮಾದರಿಯ ಹಿಂದಿರುವ ವೈಜ್ಞಾನಿಕ ತತ್ವಗಳನ್ನು ಮೆಚ್ಚಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು. ಬಳಿಕ ವೇದಿಕೆಯಲ್ಲಿ ದೀಪ ಪ್ರಜ್ವಲನೆ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಮಾರಂಭದಲ್ಲಿ ಮಾತನಾಡಿದ ಅವರು ಶಾಲೆಯ ಶೈಕ್ಷಣಿಕ ಪ್ರಗತಿಗೆ ಮೆಚ್ಚುಗೆಯನ್ನು ವ್ಯಕ್ತ ಪಡಿಸಿ ಮುಂದಿನ ದಿನಗಳಲ್ಲಿ ಅಗತ್ಯ ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದ ಆರಂಭದಲ್ಲಿ ಶೈಕ್ಷಣಿಕ ಸಂಚಾಲಕರಾದ ಕೊಡ್ಲಾಡಿ ಸುಭಾಷ್ಚಂದ್ರ ಶೆಟ್ಟಿ ಅವರು ಪ್ರಾಸ್ತಾವಿಕ ಭಾಷಣ ಮಾಡುತ್ತಾ ಶಾಲೆಯ ಧ್ಯೇಯ ಉದ್ದೇಶಗಳನ್ನು ತಿಳಿಸಿ ಅತಿಥಿ ಗಣ್ಯರನ್ನು , ಪೋಷಕರನ್ನು, ಶಿಕ್ಷಕರನ್ನು ಹಾಗೂ ವಿದ್ಯಾರ್ಥಿಗಳನ್ನು ಹಾರ್ದಿಕವಾಗಿ ಸ್ವಾಗತಿಸಿದರು.
ಶಾಲಾ ಆಡಳಿತಾಧಿಕಾರಿ ಚೈತ್ರಾ ಯಡಿಯಾಳ ಅವರು ರಾಷ್ಟ್ರೀಯ ವಿಜ್ಞಾನ ದಿನದ ಮಹತ್ವವನ್ನು ವಿವರಿಸಿ, ಈ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಅಭಿನಂದಿಸಿದರು. ವಿಜ್ಞಾನ ಮನೋಭಾವವನ್ನು ಬೆಳೆಸುವುದು ಇಂದಿನ ಯಾಂತ್ರಿಕ ಯುಗದ ಅತಿ ಅವಶ್ಯಕತೆಗಳಲ್ಲಿ ಒಂದಾಗಿದೆ ಎಂದು ತಿಳಿಸಿದರು.
ಟ್ರಸ್ಟ್ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ ಅವರು ಅಧ್ಯಕ್ಷೀಯ ಭಾಷಣದಲ್ಲಿ ಶಾಲೆಯನ್ನು ತಾಲೂಕಿನಲ್ಲಿ ಮಾದರಿ ಶಾಲೆಯನ್ನಾಗಿ ರೂಪಿಸುವ ದೃಢ ಸಂಕಲ್ಪವನ್ನು ವ್ಯಕ್ತಪಡಿಸಿ ,ಇಂದಿನ ಪ್ರದರ್ಶನಕ್ಕಾಗಿ ಶ್ರಮಿಸಿದ ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳ ಪರಿಶ್ರಮವನ್ನು ಕೊಂಡಾಡಿದರು.
ವಿಜ್ಞಾನ ಶಿಕ್ಷಕಿ ಪ್ರಜ್ಞಾ ಅವರು ಮುಖ್ಯ ಅತಿಥಿಗಳಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಿದರು ಹಾಗೂ ಪ್ರದರ್ಶನದ ಎಲ್ಲಾ ಮಾದರಿಗಳ ಬಗ್ಗೆ ವಿವರವಾದ ಮಾಹಿತಿ ನೀಡಿ ಮಾರ್ಗದರ್ಶನ ಮಾಡಿದರು. ವಿದ್ಯಾರ್ಥಿಗಳು ತಮ್ಮ ಮಾದರಿಗಳ ಕಾರ್ಯವಿಧಾನವನ್ನು ಆತ್ಮವಿಶ್ವಾಸದಿಂದ ವಿವರಿಸಿದ್ದು, ಪೋಷಕರು ಹಾಗೂ ಸಾರ್ವಜನಿಕರಿಂದ ಅಪಾರ ಪ್ರಶಂಸೆಯನ್ನು ಪಡೆದರು.
ಈ ಕಾರ್ಯಕ್ರಮವು ವಿಜ್ಞಾನ ಜಿಜ್ಞಾಸೆ, ಸೃಜನಶೀಲತೆ ಮತ್ತು ನವೀನ ಚಿಂತನೆಗೆ ಉತ್ತೇಜನ ನೀಡುವ ದಿಶೆಯಲ್ಲಿ ಯಶಸ್ವಿ ಹೆಜ್ಜೆ ಎನಿಸಿತು .

Click Here

LEAVE A REPLY

Please enter your comment!
Please enter your name here