ಕುಂದಾಪುರ ಗ್ರಾಮಾಂತರ ಠಾಣೆಯ ಎಸ್‌ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

0
1575

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಉಡುಪಿಯಲ್ಲಿ ಇಂದು ಬೆಳಗ್ಗೆ ಹಮ್ಮಿಕೊಳ್ಳಲಾದ ಮ್ಯಾರಥಾನ್ ನಲ್ಲಿ ಪಾಲ್ಗೊಂಡಿದ್ದ ಕುಂದಾಪುರ ಗ್ರಾಮಾಂತರ ಎಸ್‌ಐ ನಾಸೀರ್ ಹುಸೇನ್ (58) ಕುಸಿದು ಬಿದ್ದು ಮೃತಪಟ್ಟಿದ್ದಾರೆ.

Click Here

ನಮ್ಮಪೊಲೀಸ್ ನಮ್ಮ ಹೆಮ್ಮೆ ಎಲ್ಲರಿಗೂ ಫಿಟೈಸ್ ಡಬ್ ಫ್ರೀ ಕರ್ನಾಟಕ ಸೈಬರ್ ಜಾಗೃತಿಗಾಗಿ 5 ಕಿ.ಮೀ ಮ್ಯಾರಥಾನ್ ಓಟವನ್ನು ಉಡುಪಿ ಅಜ್ಜರಕಾಡು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಎಸ್‌ಐ ನಾಸೀರ್ ಹುಸೇನ್ ಸೇರಿದಂತೆ ನೂರಾರು ಪೊಲೀಸರು ಪಾಲ್ಗೊಂಡಿದ್ದರು. ಮ್ಯಾರಥಾನ್ ಓಡುತ್ತಿದ್ದ ನಾಸೀ‌ರ್ ಹುಸೇನ್ ಒಮ್ಮೆಲೆ ಕುಸಿದು ಬಿದ್ದು ತೀವ್ರವಾಗಿ ಅಸ್ವಸ್ಥಗೊಂಡರು. ಕೂಡಲೇ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯರು ಅವರು ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ.

ನಾಸಿ‌ರ್ ಹುಸೇನ್ ಅವರು ಉಡುಪಿ ಜಿಲ್ಲೆಯ ಅಮಾಸೆಬೈಲು, ಕುಂದಾಪುರ ನಗರ, ಕುಂದಾಪುರ ಸಂಚಾರ ಠಾಣೆ, ಶಂಕರನಾರಾಯಣ, ಕಾರ್ಕಳ ಗ್ರಾಮಾಂತರ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಠಾಣೆಯಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸಿದ್ದರು.

Click Here

LEAVE A REPLY

Please enter your comment!
Please enter your name here