ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಸಹಕಾರ ವ್ಯವಸ್ಥೆಯಲ್ಲಿ ಜನ ನಂಬಿಕೆ ಇಟ್ಟಿರುವುದರಿಂದ ಸಹಕಾರ ಕ್ಷೇತ್ರ ಇಷ್ಟೊಂದು ವ್ಯಾಪಕವಾಗಿ ಬೆಳೆದಿದೆ. ಅಭಿವೃದ್ಧಿ, ಸ್ವಾವಲಂಬನೆ ಸಾಧಿಸುವ ಮೂಲಕ ವಾಣಿಜ್ಯ ಬ್ಯಾಂಕುಗಳಿಗಿಂತ ಬಲಿಷ್ಠವಾಗಿ ಸಹಕಾರ ವ್ಯವಸ್ಥೆ ಬೆಳೆಯುತ್ತಿದೆ ಎಂದು ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಡಾ.ಎನ್.ರಾಜೇಂದ್ರ ಕುಮಾರ್ ಹೇಳಿದರು.
ಅವರು ಮಾ.14ರಂದು ಅಂಪಾರು ಸಹಕಾರಿ ವ್ಯವಸಾಯಿಕ ಸಂಘದ ನೂತನ ಕಟ್ಟಡ ರೈತ ಸೌಧವನ್ನು ಉದ್ಘಾಟಿಸಿ ಮಾತನಾಡಿದರು.
ಅಂಪಾರು ಸಹಕಾರಿ ವ್ಯವಸಾಯಿಕ ಸಂಘದ ಸಾಧನೆ ಮಾದರಿಯಾಗಿದೆ. ಲಿಪ್ಟ್, ಹವಾನಿಯಂತ್ರಿತ ವ್ಯವಸ್ಥೆ, ಸಭಾಂಗಣ ಹೀಗೆ ಸಾಕಷ್ಟು ಸೌಲಭ್ಯಗಳನ್ನು ಅಳವಡಿಸಿಕೊಂಡಿದೆ. ಈ ಕಟ್ಟಡಕ್ಕೆ ಹತ್ತು ಲಕ್ಷ ರೂಪಾಯಿ ನೀಡುತ್ತೇನೆ, ಸಭಾಂಗಣದ ಪೀಠೋಪಕರಣದ ವೆಚ್ಚವನ್ನು ಕೊಡುತ್ತೇನೆ ಎಂದರು.
ನಾನು ರಾಜಕೀಯಕ್ಕೆ ಬರುವುದಿಲ್ಲ, ರಾಜಕೀಯದಲ್ಲಿ ಉತ್ತಮ ವ್ಯಕ್ತಿಗಳನ್ನು ಬೆಳೆಸೋಣ, ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಒತ್ತು ಕೋಡೋಣ ಎಂದರು.
ನವೋದಯ ಸ್ವಸಹಾಯ ಗುಂಪುಗಳ ರಚನೆಯ ಉದ್ದೇಶ ಮಹಿಳಾ ಸಬಲೀಕರಣ. ಮಹಿಳೆಯರು ಆರ್ಥಿಕವಾಗಿ ಸಶಕ್ತರಾಗಬೇಕು ಎನ್ನುವ ಉದ್ದೇಶದಿಂದ 25 ವರ್ಷಗಳ ಹಿಂದೆ ನವೋದಯ ಸಂಘಗಳ ಉದಯವಾಯಿತು. ಇವತ್ತು ಬಲಿಷ್ಠವಾಗಿ ಬೆಳೆದಿದೆ. 9 ಜಿಲ್ಲೆಗಳಲ್ಲಿ ನವೋದಯ ಸ್ವಸಹಾಯ ಗುಂಪುಗಳು ಕಾರ್ಯನಿರ್ವಹಿಸುತ್ತಿವೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಂಪಾರು ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾದ ಕೆ.ಪ್ರದೀಪ್ ಶೆಟ್ಟಿ ಗುಡಿಬೆಟ್ಟು, ಅಂಪಾರಿನ ಕನಸು ಇಂದು ನನಸಾಗಿದೆ. ಒಂದು ಗ್ರಾಮಕ್ಕೇ ಸೀಮಿತವಾಗಿರುವ ಈ ಸಂಘಕ್ಕೆÀ 1997ರಲ್ಲಿ ಸ್ವಂತ ಕಟ್ಟಡ ನಿರ್ಮಾಣವಾಯಿತು. ಎಲ್ಲರ ಸಹಕಾರದಿಂದ ಸಂಘ ಈಗ ಯಶಸ್ವಿಯಾಗಿ ಮುನ್ನೆಡೆಯುತ್ತಿದೆ. ಪುನಃ ಲಾಭದ ಪಥಕ್ಕೆ ಬರುತ್ತಿದೆ. ವ್ಯವಹಾರವನ್ನು ಅತ್ಯಂತ ಪಾರದರ್ಶಕವಾಗಿ ಮಾಡಲು ತಂತ್ರಜ್ಞಾನದ ಬಳಕೆಯೊಂದಿಗೆ ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದರು.
ಆಡಳಿತ ಸಭಾಂಗಣವನ್ನು ಉದ್ಘಾಟಿಸಿದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿ, ಒಂದು ಗ್ರಾಮದ ಕಾರ್ಯವ್ಯಾಪ್ತಿಯನ್ನು ಹೊಂದಿರುವ ಅಂಪಾರು ಸಹಕಾರಿ ವ್ಯವಸಾಯಿಕ ಸಂಘ ಇಷ್ಟೊಂದು ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಿರುವುದು ಆಡಳಿತ ಮಂಡಳಿ, ಸದಸ್ಯರು, ನೌಕರವೃಂದದ ಪರಿಶ್ರಮದ ಫಲ ಎಂದರು.
ಭದ್ರತಾ ಕೊಠಡಿಯನ್ನು ಉದ್ಘಾಟಿಸಿದ ಮಾಜಿ ಶಾಶಕ ಬಿ.ಎಂ.ಸುಕುಮಾರ ಶೆಟ್ಟಿ ಮಾತನಾಡಿ, ಎಂ.ಎನ್.ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಸಹಕಾರ ವ್ಯವಸ್ಥೆ ಅತ್ಯಂತ ಪಾರದರ್ಶಕವಾಗಿ ಮುನ್ನೆಡೆಯುತ್ತಿದೆ. ಜನತೆಯಲ್ಲಿ ವಿಶ್ವಾಸ ಮೂಡಿಸುವ ಕೆಲಸವಾಗುತ್ತಿದೆ. ಇವತ್ತು ರಾಜ್ಯದ ಎಲ್ಲಾ ಡಿಸಿಸಿ ಬ್ಯಾಂಕುಗಳಲ್ಲಿ ಎಸ್.ಸಿ.ಡಿಸಿಸಿ ಬ್ಯಾಂಕ್ ಶ್ರೇಷ್ಠತೆ ಹೊಂದಿದೆ ಎಂದರು.
ಗೋದಾಮು ಕಟ್ಟಡವನ್ನು ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿರ್ದೇಶಕ ಡಾ.ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಉದ್ಘಾಟಿಸಿದರು. ಮೊಳಹಳ್ಳಿ ಶಿವರಾವ್ ಸಭಾಂಗಣವನ್ನು ದ.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿರ್ದೇಶಕ ಎಂ.ಮಹೇಶ ಹೆಗ್ಡೆ ಉದ್ಘಾಟಿಸಿದರು. ಸಾಮಾನ್ಯ ಸೇವಾ ಕೇಂದ್ರವನ್ನು ಜಯಕರ ಶೆಟ್ಟಿ ಇಂದ್ರಾಳಿ ಉದ್ಘಾಟಿಸಿದರು. ಗೋದಾಮು ಕಟ್ಟಡವನ್ನು ಉಡುಪಿ ಜಿಲ್ಲೆ ಸಹಕಾರ ಸಂಘಗಳ ಉಪ ನಿಬಂಧಕರಾದ ಶ್ರೀಮತಿ ಲಾವಣ್ಯ ಕೆ.ಆರ್ ಉದ್ಘಾಟಿಸಿದರು.
ಕಾರ್ಯಕ್ರಮಕ್ಕೆ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸುಧೀರ್ ಕುಮಾರ್ ಜೆ, ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿ., ಕುಂದಾಪುರ ಇದರ ಅಧ್ಯಕ್ಷರಾದ ಮಲ್ಯಾಡಿ ಶಿವರಾಮ ಶೆಟ್ಟಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರನ್ನು ಸನ್ಮಾನಿಸಲಾಯಿತು.
ಸಂಘದ ನಿರ್ದೇಶಕರಾದ ಮೋಹನ ವೈದ್ಯ, ಕಿರಣ್ ಹೆಗ್ಡೆ, ಅರುಣ್ ಕುಮಾರ್ ಶೆಟ್ಟಿ, ಮನೋಹರ್ ಶೆಟ್ಟಿ, ಜಯರಾಮ ಶೆಟ್ಟಿ, ಉಮೇಶ ಕೊಠಾರಿ, ಅಜಿತ್ ಕುಮಾರ್, ಶೀಮತಿ ಜ್ಯೋತಿ ಉದಯ ಕುಮಾರ್ ಶೆಟ್ಟಿ, ಶ್ರೀಮತಿ ಭಾರತಿ ಬಾಲಕೃಷ್ಣ ಶೇಟ್, ಮಂಜುನಾಥ ನಾಯ್ಕ, ಸುನಿಲ್, ವಲಯ ಮೇಲ್ವಿಚಾರಕ ಚಂದ್ರಶೇಖರ ಶೆಟ್ಟಿ ಉಪಸ್ಥಿತರಿದ್ದರು.
ಸಂಘದ ಉಪಾಧ್ಯಕ್ಷರಾದ ನವೀನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಸಂಘದ ಸಿಬ್ಬಂದಿ ರವಿಕಲಾ ಜೋಗಿ ಪ್ರಾರ್ಥನೆ ಮಾಡಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿ, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟ ವಂದಿಸಿದರು.












