ಕುಂದಾಪುರ ಮಿರರ್ ಸುದ್ದಿ…
ಕೋಟ: ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮದರ್ಜೆ ಕಾಲೇಜು ಕೋಟ-ಪಡುಕೆರೆ ಇಲ್ಲಿನ ವಾಣಿಜ್ಯಶಾಸ್ತ್ರ ವಿಭಾಗ ಮತ್ತು ಕಾಲೇಜಿನ ಐ.ಕ್ಯೂ.ಎ.ಸಿ ವತಿಯಿಂದ ವಾಣಿಜ್ಯಶಾಸ್ತ್ರ ವಿಷಯಗಳಲ್ಲಿ ವಿಶೇಷ ಉಪನ್ಯಾಸ ಮಾಲಿಕೆ ಇತ್ತೀಚಿಗೆ ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಕಳ ಭುವನೇಂದ್ರಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಅನಂತ್ ಪೈ ಇವರು‘ಡೈರೆಕ್ಟ್‍ಟ್ಯಾಕ್ಸೇಶನ್’, ಪೂರ್ಣಪ್ರಜ್ಞ ಕಾಲೇಜಿನ ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ನಾಗರಾಜ್ ಇವರು ‘ಪ್ರಾಡಕ್ಟ್& ಪ್ರೈಸಿಂಗ್ ಸ್ಟ್ರಾಟಜೀಸ್’ ಹಾಗೂ ಹೆಬ್ರಿ ಸರಕಾರಿ ಪ್ರಥಮ ದರ್ಜೆಕಾಲೇಜಿನ ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಪ್ರದೀಪ್‍ಆನಂದ್ ಶೆಟ್ಟಿ ಇವರು ‘ಪರ್ಸನಲ್ ಇನ್‍ವೆಸ್ಟ್‍ಮೆಂಟ್ ಮ್ಯಾನೇಜ್‍ಮೆಂಟ್’ ಕುರಿತಾಗಿ ಉಪನ್ಯಾಸ ನೀಡಿದರು.
ಕಾರ್ಯಕ್ರಮಕ್ಕೆ ಚಾಲನೆಯಿತ್ತ ಪ್ರಾಂಶುಪಾಲ ನಿತ್ಯಾನಂದ ವಿಗಾಂವ್ಕರ್ ಇಂತಹ ವಿಶೇಷ ಉಪನ್ಯಾಸದ ಸದುಪಯೋಗ ಪಡೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಐ.ಕ್ಯೂ.ಎ.ಸಿ ಸಂಚಾಲಕ ಹಾಗೂ ವಿಭಾಗ ಮುಖ್ಯಸ್ಥ ರವಿಪ್ರಸಾದ್.ಕೆ.ಜಿ ಕಾರ್ಯಕ್ರಮ ಔಚಿತ್ಯವನ್ನು ಪ್ರಾಸ್ತಾವಿಕ ಮಾತುಗಳಲ್ಲಿ ತಿಳಿಸಿದರು. ಕಾರ್ಯಕ್ರಮ ಆಯೋಜಿಸಿದ ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಮನೋಹರ್ ಉಪ್ಪುಂದ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿ ಸ್ವಾಗತಿಸಿದರೆ ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಪ್ರಶಾಂತ್ ನೀಲಾವರ ಕಾರ್ಯಕ್ರಮ ನಿರೂಪಿಸಿದರು. ಬೋಧಕ-ಬೋಧಕೇತರ ವೃಂದದವರು ಉಪಸ್ಥಿತರಿದ್ದು ಸಹಕರಿಸಿದರು.











