ಸಿಎಸ್‍ಸಿ ಕೇಂದ್ರದ ಮೂಲಕ ಜನಸೇವೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಕಾರಿಯಾಗಿದೆ- ಜ್ಯೋತಿ ಉದಯ್ ಪೂಜಾರಿ

0
867

Click Here

Click Here

ಕುಂದಾಪುರ ಮಿರರ್ ಸುದ್ದಿ…
ಕೋಟ:
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬ್ರಹ್ಮಾವರ ತಾಲ್ಲೂಕಿನ ಪಾಂಡೇಶ್ವರ ವಲಯ, ಕೋಡಿ, ಕಾವಡಿ, ಕಾರ್ಕಡ ಕಾರ್ಯಕ್ಷೇತ್ರದ ಸಿಎಸ್‍ಸಿ ಕೇಂದ್ರಗಳ ಉದ್ಘಾಟನೆಯನ್ನು ಬ್ರಹ್ಮಾವರದ ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷೆ ಜ್ಯೋತಿ ಉದಯ ಪೂಜಾರಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿ ಪೂಜ್ಯ ಖಾವಂದರರ ಮಾರ್ಗದರ್ಶನದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನಪರ ಸೇವೆಗೈಯುತ್ತಿದ್ದಾರೆ. ಅದರೊಂದಿಗೆ ಸರಕಾರದ ಎಲ್ಲಾ ಕಾರ್ಯಕ್ರಮವನ್ನು ಗ್ರಾಮದ ಎಲ್ಲಾ ಜನರಿಗೆ ತಲುಪಲು ಉದ್ದೇಶದಿಂದ ಸಿಎಸ್‍ಸಿ ಕೇಂದ್ರದ ಮೂಲಕ ಜನಸಾಮಾನ್ಯರಿಗೆ ಅನುಕೂಲಕರ ವಾತಾವರಣ ಸೃಷ್ಠಿಸಿದ್ದಾರೆ ಎಂದು ಶುಭ ಹಾರೈಸಿದರು.

Click Here

ಧ.ಗ್ರಾ.ಯೋಜನಾಧಿಕಾರಿ ದಿನೇಶ್ ಶೇರಿಗಾರ್ ಮಾತನಾಡಿ ಸಿಎಸ್‍ಸಿ ಕೇಂದ್ರ ಫಲಾನುಭವಿಗಳಿಗೆ ಸರಕಾರದ ವಿವಿಧ ಸೌಲಭ್ಯಗಳನ್ನು ಒದಗಿಸಲು ಸಹಾಕಾರಿಯಾಗಿದೆ ಎಂದು ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಪಾಂಡೇಶ್ವರ ರಕ್ತೇಶ್ವರಿ ದೇವಸ್ಥಾನದ ಧರ್ಮದರ್ಶಿ ರಮೇಶ್ ರಾವ್, ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ಪ್ರತಾಪ್ ಶೆಟ್ಟಿ,ಸಾಲಿಗ್ರಾಮ ಪಟ್ಟಣ ಪಂಚಾಯತ ಅಧ್ಯಕ್ಷ ಸುಲತಾ ಹೆಗ್ಡೆ, ಹಾಗೂ ವಲಯದ ಎಲ್ಲಾ ಅಧ್ಯಕ್ಷರು, ಪದಾಧಿಕಾರಿಗಳು ಸದಸ್ಯರು ವಲಯ
ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪಾಂಡೇಶ್ವರ ವಲಯದ ಮೇಲ್ವಿಚಾರಕ ನಾಗೇಂದ್ರ ಎಸ್ ರವರು ಸ್ವಾಗತಿಸಿ ನಿರೂಪಿಸಿದರು.ಕಾವಡಿ ಸೇವಾಪ್ರತಿನಿಧಿ ರಮೇಶ್ ರಾವ್ ಧನ್ಯವಾದಗೈದರು.

Click Here

LEAVE A REPLY

Please enter your comment!
Please enter your name here