ವಾರಾಹಿ ಯೋಜನೆ: ಯಾರಿಗೂ ಅನ್ಯಾಯ ಆಗಲು ಬಿಡಲ್ಲ

0
280

Click Here

Click Here

ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ

ಕುಂದಾಪುರ ಮಿರರ್ ಸುದ್ದಿ….
ಕುಂದಾಪುರ :ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಮುಂಬರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Click Here

ಕುಂದಾಪುರದ ಕೋಟೇಶ್ವರ ಸಮೀಪದ ಯುವ ಮೆರಿಡಿಯನ್‌ ಹೆಲಿಪ್ಯಾಡ್‌ ಬಳಿ ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಅಧಿಕಾರದಲ್ಲಿರುವ ಪಕ್ಷದ ಕಡೆಗೆ ಮತದಾರರ ಒಲವಿರುತ್ತದೆ. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಮನೆ ಮನೆಗೆ ತಲುಪಿವೆ. ಅಭಿವೃದ್ಧಿಯ ಜೊತೆಗೆ ಜನರ ಆದಾಯ ಕೂಡ ಜಾಸ್ತಿ ಆಗಿದೆ. ಅದರಲ್ಲೂ ಮಹಿಳಾ ಮತದಾರರು ಸಂತೋಷದಲ್ಲಿದ್ದಾರೆ ಎಂದರು.

ಎರಡು ಕ್ಷೇತ್ರಗಳಲ್ಲೂ ಗೆದ್ದೇ ಗೆಲ್ಲುತ್ತೇವೆ. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಟಿಕೆಟ್‌ ಕೇಳುವ ಹಕ್ಕಿದೆ. ಗೆಲುವೊಂದೇ ನಮಗೆ ಮಾನದಂಡ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಅವರ ಕುಟುಂಬ ಸದಸ್ಯರಿಗೆ ಟಿಕೆಟ್‌ ನೀಡಲಾಗಿದೆ. ಇದು ಹೈಕಮಾಂಡ್‌ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.

ವಾರಾಹಿ ಯೋಜನೆ: ಯಾರಿಗೂ ಅನ್ಯಾಯ ಆಗಲು ಬಿಡಲ್ಲ
ವಾರಾಹಿ ಯೋಜನೆಗೆ ಸಂಬಂಧಪಟ್ಟಂತೆ ಈಗಾಗಲೇ ಎರಡು ಕಡೆಯ ರೈತರು ಮನವಿ ನೀಡಿದ್ದು, ಯಾರಿಗೂ ಅನ್ಯಾಯ ಆಗಬಾರದು ಎಂಬುದೇ ಜಿಲ್ಲಾಡಳಿತ ಹಾಗೂ ಸರ್ಕಾರದ ಆಶಯವಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ತಿಳಿಸಿದರು.

ಈಗಾಗಲೇ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈತಾಪಿ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸುವ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

ಇನ್ನು ಬೈಂದೂರು ನೂತನ ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣಕ್ಕೆ ಒಂದಷ್ಟು ಸರ್ಕಾರಿ ಬಸ್‌ಗಳು ಪ್ರವೇಶಿಸುವುದಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಬಗ್ಗೆ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಸಭೆ ಕರೆದು ಶೀಘ್ರವೇ ಸಮಸ್ಯೆ ಬಗೆ ಹರಿಸಲಾಗುವುದು ಎಂದರು.

Click Here

LEAVE A REPLY

Please enter your comment!
Please enter your name here