ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಇಲ್ಲಿನ ಕ್ರೀಯಾಶೀಲ ಸಂಘಟನೆಯಾದ ಕೋಟದ ಪಂಚವರ್ಣ ಸಂಘಟನೆಗೆ ಮಣೂರು ಫ್ರೆಂಡ್ಸ್ ಮಣೂರು ಇದರ ರಜತ ಸಂಭ್ರಮ ವಿಶೇಷ ಪುರಸ್ಕಾರಕ್ಕೆ ಆಯ್ಕೆಗೊಳಿಸಿದೆ.
ಇದೇ ಎಪ್ರಿಲ್ 1ರಂದು ಮಣೂರು ಮಹಾಲಿಂಗೇಶ್ವರ ದೇಗುಲದ ಜಾತ್ರೋತ್ಸವದ ಅಂಗವಾಗಿ ಹಮ್ಮಿಕೊಳ್ಳುವ ವೇದಿಕೆಯಲ್ಲಿ ಈ ಪುರಸ್ಕಾರ ನೀಡಿ ಗೌರವಿಸಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.












