ಸಾಲಿಗ್ರಾಮ ಸರ್ವಿಸ್ ರಸ್ತೆ ಕಾಮಗಾರಿ ಆರಂಭಿಸಲು 15ದಿನ ಗಡವು ನೀಡಿದ ಹೆದ್ದಾರಿ ಜಾಗೃತಿ ಸಮಿತಿ

0
778

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕೋಟ: ಸಾಲಿಗ್ರಾಮ ಸರ್ವಿಸ್ ರಸ್ತೆ ಕಾಮಗಾರಿ ಆರಂಭಿಸಲು 15ದಿನ ಗಡವು ನೀಡಿದ ಹೆದ್ದಾರಿ ಜಾಗೃತಿ ಸಮಿತಿಕೋಟ: ಸಾಲಿಗ್ರಾಮ ಸರ್ವಿಸ್ ರಸ್ತೆ ಅರೆಬರೆ ಕಾಮಗಾರಿ ಹಾಗೂ ವಿಳಂಬ ನೀತಿಯ ಸಿಡಿದೆದ್ದ ವಿರುದ್ಧ ಹೆದ್ದಾರಿ ಜಾಗೃತಿ ಸಮಿತಿ ಶುಕ್ರವಾರ ಸಾಲಿಗ್ರಾಮ ಬಸ್ ನಿಲ್ದಾಣ ಸಭೆ ನಡೆಸಿ ಕಾಮಗಾರಿ ಆರಂಭಿಸಲು15ದಿನ ಗಡುವು ನೀಡಿದೆ.

ಈ ಕುರಿತು ಮಾತನಾಡಿದ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ ಅಧ್ಯಕ್ಷ ಶ್ಯಾಮಸುಂದರ ನಾಯಿರಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸದೆ ಟೋಲ್ ಸಂಗ್ರಹಕ್ಕೆ ನವಯುಗ ಕಂಪನಿ ಮುಂದಾಗಿದೆ, ಇದು ಎಷ್ಟು ಸರಿ 2010ರಲ್ಲಿ ಆರಂಭಗೊಂಡ ಕಾಮಗಾರಿ 2013ರೊಳಗೆ ಕಾಮಗಾರಿ ಪೂರ್ಣಗೊಳಿಸಲು ಹೆದ್ದಾರಿ ಪ್ರಾಧಿಕಾರಿಸೂಚಿಸಿದರೂ 2022 ಬಂದರೂ ಅರೆಬರೆಯಲ್ಲೆ ನಿಲ್ಲಿಸಿ ಜನಸಾಮಾನ್ಯರ ಜೀವದ ಜೊತೆ ಚಲ್ಲಾಟವಾಡುತ್ತಿದೆ.ಈ ಬಗ್ಗೆ ಹಲವು ಬಾರಿ ಹೋರಾಟ ಮಾಡಿ ಯಶಸ್ಸು ಪಡೆದಿದ್ದೇವೆ ಇದೀಗ ಮತ್ತದೆ ಸನ್ನಿವೇಶ ಎದುರಾಗಿದ್ದು ಮಾರ್ಚ 10ರೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು ಇಲ್ಲವಾದಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸಬೇಕಾದಿತು ಎಂದು ಎಚ್ಚರಿಸಿದರು.

ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ ಮಾಜಿ ಅಧ್ಯಕ್ಷ ಪ್ರತಾಪ್ ಶೆಟ್ಟಿ ಸಾಸ್ತಾನ ಮಾತನಾಡಿ ಇದು ನಮ್ಮ ಸ್ವಾರ್ಥಕ್ಕಲ್ಲ ಬದಲಾಗಿ ಜನಸಾನ್ಯರಿಗೊಸ್ಕರ ಹೋರಾಟಕ್ಕಿಳಿದಿದ್ದೇವೆ,ಅದೆಷ್ಟೊ ಪ್ರಾಣ ತೆಗೆದ ಅವೈಜ್ಞಾನಿಕ ಕಾಮಗಾರಿಯ ವಿರುದ್ಧ ಗುಡುಗಿದರಲ್ಲದೆ ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದರೆ ಟೋಲ್‍ಗೆ ಬೀಗ ಜಡಿಯುವುದಾಗಿ ಎಚ್ಚರಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯರೊಂದಿಗೆ ಚರ್ಚಿಸಿ ಮುಂದಿನ ಹೋರಾಟದ ಹೇಳಿಕೆ ಪಡೆದರು.

Click Here

ಹೆದ್ದಾರಿ ಜಾಗೃತಿ ಸಮಿತಿ ಮಾಜಿ ಕಾರ್ಯದರ್ಶಿ ವಿಠ್ಠಲ್ ಪೂಜಾರಿ ಐರೋಡಿ ಪ್ರಾಸ್ತಾವನೆ ಸಲ್ಲಿಸಿ ಸ್ವಾಗತಿಸಿದರು.

ಸಾಲಿಗ್ರಾಮ ಪ.ಪಂಚಾಯತ್ ಅಧ್ಯಕ್ಷೆ ಸುಲತಾ ಹೆಗ್ಡೆ,ಉಪಾಧ್ಯಕ್ಷೆ ಅನುಸೂಯ ಹೇರ್ಳೆ,ಸದಸ್ಯೆ ರತ್ನನಾಗರಾಜ್ ಗಾಣಿಗ,ಸಾಲಿಗ್ರಾಮ ಶ್ರೀಗುರುನರಸಿಂಹ ದೇವಸ್ಥಾನದ ಅಧ್ಯಕ್ಷ ಡಾ.ಕೆ.ಎಸ್ ಕಾರಂತ್,ಹೆದ್ದಾರಿ ಜಾಗೃತಿ ಸಮಿತಿ ಕಾರ್ಯದರ್ಶಿ ಅಲ್ವಿನ್ ಅಂದ್ರಾದೆ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಹೆದ್ದಾರಿ ಜಾಗೃತಿ ಸಮಿತಿಯ ಪ್ರಶಾಂತ್ ಶೆಟ್ಟಿ ಪಾಂಡೇಶ್ವರ ನಿರ್ವಹಿಸಿದರು.

Click Here

LEAVE A REPLY

Please enter your comment!
Please enter your name here