ಉಡುಪಿ :ಪತ್ರಕರ್ತ ಪ್ರಶಾಂತ್ ಪಾದೆಗೆ ರಾಜ್ಯ ಪ್ರಶಸ್ತಿ

ಕುಂದಾಪುರ ಮಿರರ್ ಸುದ್ದಿ…

ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ)ವು 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, *‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ (ಗ್ರಾಮೀಣ ಜನ-ಜೀವನದ ವರದಿ)’* ಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಹಾಗೂ ಕುಂದಾಪುರ ಉದಯವಾಣಿ ವರದಿಗಾರರಾದ ಪ್ರಶಾಂತ್ ಪಾದೆ ಆಯ್ಕೆಯಾಗಿದ್ದಾರೆ.

ಬೀದರದಲ್ಲಿ ಏಪ್ರಿಲ್ 11 ಮತ್ತು 12ರಂದು ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *

More posts