ಕುಂದಾಪುರ ಮಿರರ್ ಸುದ್ದಿ.
ಕುಂದಾಪುರ: ಕುಂದಾಪುರದಲ್ಲಿ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿರುವ ಹಿಜಾಬ್ ವಿವಾದ ಸೋಮವಾರವೂ ಮುಂದುವರಿದಿದ್ದು, ಕುಂದಾಪುರ ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿನಿಯರು ಎಂದಿನಂತೆ ಹಿಜಾಬ್ ಧರಿಸಿ ಬಂದಿದ್ದರು.

ರಾಜ್ಯ ಸರಕಾರ ಕಾಲೇಜು ಆವರಣದೊಳಕ್ಕೆ ಸಮವಸ್ತ್ರ ಧರಿಸಿದ ವಿದ್ಯಾರ್ಥಿಗಳ ಹೊರತಾಗಿ ಇತರರಿಗೆ ಪ್ರವೇಶವಿಲ್ಲ ಎಂಬ ಆದೇಶ ಹೊರಡಿಸಿದ್ದರಿಂದ ಪ್ರಾಂಶುಪಾಲರು ಮನವೊಲಿಸುವ ಪ್ರಯತ್ನ ಮಾಡಿದರಾದರೂ ವಿದ್ಯಾರ್ಥಿನಿಯರು ಒಪ್ಪದ ಕಾರಣ ಅವರನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಯಿತು.











