ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ರಾಜ್ಯ ಸರಕಾರವು ಸಮವಸ್ತ್ರ ಕಡ್ಡಾಯ ಮಾಡಿ ಸುತ್ತೋಲೆ ಹೊರಡಿಸಿದ್ದರೂ ಕುಂದಾಪುರದ ಕಾಲೇಜುಗಳಲ್ಲಿ ಈ ಬಗ್ಗೆ ಗೊಂದಲ ಮುಂದುವರಿದಿದೆ.

ಕೊಟೇಶ್ವರ ಸಮೀಪ ಕಾಗೇರಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರಿಂದ, ಒಂದಷ್ಟು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿದರು. ಕಾಲೇಜು ಆವರಣದೊಳಕ್ಕೆ ಇಬ್ಬರಿಗೂ ಪ್ರವೇಶ ನಿರಾಕರಿಸಿದ್ದರಿಂದ ಮೂವರು ವಿದ್ಯಾರ್ಥಿನಿಯರು ಮನೆಗೆ ಹಿಂದಿರುಗಿದರೆ, ವಿದ್ಯಾರ್ಥಿಗಳು ಕೆಸರಿ ಶಾಲು ಕಳಚಿ ತರಗತಿ ಪ್ರವೇಶಿಸಿದರು.


ಕುಂದಾಪುರದ ವೆಂಕಟರಮಣ ಪಿಯು ಕಾಲೇಜಿನ ಕೆಲವು ವಿದ್ಯಾರ್ಥಿಗಳು, ಹಿಜಾಬ್ ಧರಿಸುವುದಕ್ಕೆ ಪ್ರತಿಯೋಧಿಸಿ ಕೇಸರಿ ಶಾಲು ಧರಿಸಿ ಬಂದ ಘಟನೆಯೂ ನಡೆಯಿತು. ಕಾಲೇಜು ಆವರಣದೊಳಕ್ಕೆ ಹಿಜಾಬ್ ಹಾಗೂ ಕೇಸರಿ ಶಾಲು ಧರಿಸಿದವರಿಗೆ ಪ್ರವೇಶ ನಿರಾಕರಿಸಿದರು.
ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಶಾಲುಗಳನ್ನು ತೆಗೆದ ನಂತರವೇ ಕ್ಯಾಂಪಸ್ ಒಳಗೆ ಪ್ರವೇಶಿಸಲು ಕಟ್ಟುನಿಟ್ಟಾಗಿ ಆದೇಶಿಸಿದರು. ಪ್ರಾಶುಪಾಲರ ಜೊತೆ ವಾಗ್ವಾದಕ್ಕೆ ಇಳಿದ ವಿದ್ಯಾರ್ಥಿಗಳು ಸ್ಕಾರ್ಫ್ / ಹಿಜಾಬ್ ಬುರ್ಖಾ ಧರಿಸಿ ತರಗತಿಗೆ ಪ್ರವೇಶಿಸಲು ಅವಕಾಶ ನೀಡಿದರೆ, ನಾವು ಕೇಸರಿ ಶಾಲು ಧರಿಸಿ ಮತ್ತೆ ಧರಿಸುವುದಾಗಿ ವಿದ್ಯಾರ್ಥಿಗಳು ಒತ್ತಾಯಿಸಿದರು.
ಈ ಸಂದರ್ಭ , ಸರ್ಕಾರದ ಆದೇಶದ ಪ್ರಕಾರ ಕ್ಯಾಂಪಸ್ ಒಳಗೆ ಹಿಜಾಬ್ ಮತ್ತು ಕೇಸರಿ ಶಾಲುಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ ಎಂದು ಪ್ರಾಂಶುಪಾಲ ಗಣೇಶ್ ಸ್ಪಷ್ಟಪಡಿಸಿದ್ದು ಆ ಬಳಿಕ ವಿದ್ಯಾರ್ಥಿಗಳು ಕೇಸರಿ ಶಾಲುಗಳನ್ನು ತೆಗೆದು ತರಗತಿಗಳನ್ನು ಪ್ರವೇಶಿಸಿದರು.
ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಅವರ ಮಾರ್ಗದರ್ಶನದಲ್ಲಿ ಬೀಗು ಪೊಲೀಸ್ ಬಂದೋವಸ್ತ್ ಏರ್ಪಡಿಸಲಾಗಿತ್ತು. ಎಲ್ಲಾ ಕಾಲೇಜುಗಳು ಎದುರು ಪೊಲೀಸರ ನಿಯೋಜಿಸಲಾಗಿತ್ತು.











