ಕುಂದಾಪುರ ಮಿರರ್ ಸುದ್ದಿ…
ಕೋಟ: ಪ್ರಸ್ತುತ ಕಾಲಘಟ್ಟದಲ್ಲಿ ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸುವುದು ಅತ್ಯಗತ್ಯವಾಗಿದೆ ಎಂದು ಮಣೂರು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಹೇಳಿದ್ದಾರೆ.

ಕೋಟದ ಜಟ್ಟಿಗೇಶ್ವರ ದೇವಳದ ಆವರಣದಲ್ಲಿ ಉಡುಪಿ ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಇಲಾಖೆ ,ಕೋಟ ಸಮುದಾಯ ಆರೋಗ್ಯ ಕೇಂದ್ರ ,ಅಸಾಂಕ್ರಾಮಿಕ ರೋಗಗಳ ನಿಯಂತ್ರಣಾ ಘಟಕ ಎನ್‍ಸಿಡಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಕ್ಯಾನ್ಸರ್ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಯಾವುದೇ ರೋಗ ಬಂದ ಮೇಲೆ ಆಸ್ಪತ್ರೆ ನೋಡುವುದಕ್ಕಿಂತ ಬರುವುದಕ್ಕಿಂತ ಮೊದಲ ಅಥವಾ ಪ್ರಾಥಮಿಕ ಹಂತದಲ್ಲಿ ಅದರ ಬಗ್ಗೆ ಜಾಗೃತಿ ವಹಿಸುವುದು ಅಗತ್ಯವಾಗಿದೆ.ಇಡೀ ವಿಶ್ವಕ್ಕೆ ಮಾರಕವಾಗಿ ಪರಿಣಮಿಸಿದ ಕ್ಯಾನ್ಸರ್ ಬಗ್ಗೆ ನಿರ್ಲಕ್ಷ್ಯ ಮನೋಭಾವನೆ ಬಿಟ್ಟು ಅದರ ಕುರಿತಾಗಿ ವಿಶ್ಲೇಷಿಸಿ ಬದುಕು ಸಾಗಿಸಬೇಕಾಗಿದೆ.
ಕೋಟ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗೀತಾನಂದ ಫೌಂಡೇಶನ್ ಸಾಕಷ್ಟು ಕೊಡುಗೆಯನ್ನು ನೀಡುತ್ತಿದ್ದು ಮುಂದೆಯೂ ಕೂಡಾ ಸಹಕಾರ ನೀಡಲಿದೆ ಎಂದರು.
ಕಾರ್ಯಕ್ರಮದಲ್ಲಿ ಕ್ಯಾನ್ಸರ್ ಕುರುತಾಗಿ ಕರಪತ್ರವನ್ನು ಕೋಟ ಗ್ರಾಮಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ ಬಿಡುಗಡೆಗೊಳಿಸಿದರು.
ಕೋಟ ಸಮುದಾಯ ಆಸ್ಪತ್ರೆಯ ಎನ್‍ಸಿಡಿ ಘಟಕದ ಡಾ.ಸ್ನೇಹ ಕ್ಯಾನ್ಸರ್ ಕುರಿತಾಗಿ ಮಾಹಿತಿ ನೀಡಿದರು.
ಕೋಟ ಸಮುದಾಯ ಆರೋಗ್ಯ ಕೇಂದ್ರದ ದಂತವೈದ್ಯೆ ಡಾ.ಅನಾಲಿನಿ ಬಾಯಿ ಕ್ಯಾನ್ಸರ್ ಕುರಿತು ಸವಿವರವಾಗಿ ಮಾಹಿತಿ ನೀಡಿದರು.
ಕಾರ್ಯಕ್ರಮದಲಿ ಕೋಟ ಗ್ರಾಮಪಂಚಾಯತ್ ಉಪಾಧ್ಯಕ್ಷೆ ಜಯಂತಿ ಪೂಜಾರಿ, ಮಣೂರು ಭಾಗದ ಪಂಚಾಯತ್ ಸದಸ್ಯ ಭುಜಂಗ ಗುರಿಕಾರ,ಸ್ಥಳೀಯ ಕಮಿನಿಟಿ ಹೆಲ್ತ್ ಆಫೀಸರ್ ಅನುಶ್ರೀ, ಆಶಾ,ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮತ್ತಿತರರು ಉಪಸ್ಥಿತರಿದ್ದರು. ್ಲ ಕೋಟ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವಿಶ್ವನಾಥ್ ಪ್ರಾಸ್ತಾವನೆ ಸಲ್ಲಿಸಿದರು
ಕಾರ್ಯಕ್ರಮವನ್ನು ತಾಲೂಕುಆರೋಗ್ಯ ನಿರೀಕ್ಷಕ ದೇವಪ್ಪ ಪಟೇಗಾರ್ ಸ್ವಾಗತಿಸಿ ನಿರೂಪಿಸಿದರು,ವಂದಿಸಿದರು.











