ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕುಂದಾಪುರದಲ್ಲಿ ಪೊಲೀಸರಿಂದ ಪಥಸಂಚಲನ

0
676

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಹಿಜಾಬ್- ಕೇಸರಿ ವಿವಾದದ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಕುಂದಾಪುರ ನಗರದಲ್ಲಿ ಪೊಲೀಸರು ಶುಕ್ರವಾರ ಸಂಜೆ ಪಥ ಸಂಚಲನ ನಡೆಸಿದರು.

Click Here

ಕುಂದಾಪುರ ಶಾಸ್ತ್ರೀ ವೃತ್ತದಿಂದ ಆರಂಭಗೊಂಡ ಪಥಸಂಚಲನ ಹೊಸ ಬಸ್ ನಿಲ್ದಾಣದ ಮೂಲಕವಾಗಿ ನಗರದಲ್ಲಿ ಸಂಚರಿಸಿ ಮತ್ತೆ ಪುನಃ ಶಾಸ್ತ್ರೀ ವೃತ್ತಕ್ಕೆ ಆಗಮಿಸಿ ಸಮಾಪ್ತಿಗೊಂಡಿತು.

ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ., ವೃತ್ತ ನಿರೀಕ್ಷಕ ಗೋಪಿಕೃಷ್ಣ ನೇತೃತ್ವದಲ್ಲಿ ಕುಂದಾಪುರ ಪಿಎಸ್ಐ ಸದಾಶಿವ ಗವರೋಜಿ, ಗ್ರಾಮಾಂತರ ಠಾಣೆ ಪಿಎಸ್ಐ ನಿರಂಜನ್, ಟ್ರಾಫಿಕ್ ಠಾಣೆ ಪಿಎಸ್ಐ ಸುಧಾಪ್ರಭು, ಶಂಕರನಾರಾಯಣ ಠಾಣೆ ಪಿಎಸ್ಐ ಶ್ರೀಧರ್ ನಾಯ್ಕ್, ಅಮಾಸೆಬೈಲು ಪಿಎಸ್ಐ ಸುಬ್ಬಣ್ಣ ಸೇರಿದಂತೆ ಪೊಲೀಸ್ ಸಹಾಯಕ ಉಪನಿರೀಕ್ಷಕರುಗಳು, ಸಿಬ್ಬಂದಿಗಳು ಇದ್ದರು. ಕೆ.ಎಸ್.ಆರ್.ಪಿ ಮಹಿಳಾ ವಿಭಾಗದ ಪೊಲೀಸರು, 2 ಡಿಎಆರ್ ತುಕಡಿಯ ಪೊಲೀಸರು ಪಥಸಂಚಲನದಲ್ಲಿ ಇದ್ದರು.

Click Here

LEAVE A REPLY

Please enter your comment!
Please enter your name here