ಬೈಂದೂರು ಕ್ಷೇತ್ರ ಬೈಂದೂರು ಜಲ ಜೀವನ ಮಿಷನ್ ಯೋಜನೆ ಸಂಪುಟ ಅನುಮೋದನೆಗೆ ಮುಖ್ಯಮಂತ್ರಿಗಳಿಗೆ ಮನವಿ

0
625

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಹಾಗೂ ನಬಾರ್ಡ ಸಹಯೋಗದ ಜಲ ಜೀವನ ಮಿಷನ್ ಯೋಜನೆಯಡಿ ಮನೆ ಮನೆಗೆ ನೀರು ಸರಬರಾಜು ಮಾಡುವ ರೂ.400 ಕೋಟಿಗಳ ಪ್ರಸ್ತಾವನೆಗೆ ಸಚಿವ ಸಂಪುಟದ ಅನುಮೋದನೆ ನೀಡುವಂತೆ ಶಿವಮೊಗ್ಗ ಸಂಸದರಾದ ಬಿ.ವೈ.ರಾಘವೇಂದ್ರ ಅವರು ಮುಖ್ಯಮಂತ್ರಿಗಳಲ್ಲಿ ವಿನಂತಿಸಿದರು.

Click Here

ಅವರು ಫೆ. 26 ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಪ್ರಸ್ತಾವನೆಗಳ ಮಂಜೂರಾತಿಗೆ ಮನವಿ ಮಾಡಿದರು.

ಬೈಂದೂರು ತಾಲ್ಲೂಕಿಗೆ 100 ಹಾಸಿಗೆಗಳ ಸಾಮರ್ಥ್ಯದ ತಾಲ್ಲೂಕು ಮಟ್ಟದ ಆಸ್ಪತ್ರೆಯನ್ನಾಗಿ ಉನ್ನತೀಕರಿಸಲು ಮಂಜೂರಾತಿ ನೀಡುವಂತೆಯೂ ಮನವಿ ಮಾಡಿದ ಸಂಸದರು, ಸಿದ್ದಾಪುರ, ಅಜ್ರಿ, ಕೊಡ್ಲಾಡಿ, ಹೊಸಂಗಡಿ, ಕರ್ಕುಂಜೆ ಪ್ರದೇಶಗಳಿಗೆ 1200 ಹೆಕ್ಟೆರ್ ಪ್ರದೇಶಕ್ಕೆ ನೀರಾವರಿ ಒದಗಿಸಲು ಸಿದ್ದಾಪುರ ಏತ ನೀರಾವರಿ ಯೋಜನೆಗೆ ಮಂಜೂರಾತಿ ನೀಡಲು ಕೋರಿದರು.

Click Here

LEAVE A REPLY

Please enter your comment!
Please enter your name here