ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರ ಸಂಪೂರ್ಣ ಖರ್ಚು ವೆಚ್ಚದಲ್ಲಿ ಉಚಿತ ಕಣ್ಣಿನ ಹಾಗೂ ಆರೋಗ್ಯ ತಪಾಸಣೆ

0
1003

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಮನುಷ್ಯ ಸಂಸಾರಮುಖಿಯಾಗಿರದೇ ಸಮಾಜಮುಖಿಯಾಗಿ ಬದುಕಿದರೆ ಸನ್ಮಾನಗಳು ಹುಡುಕಿ ಬರುತ್ತದೆ. ಕರ್ತವ್ಯವು ಧರ್ಮದ ಕಡೆಗೆ ಇರಬೇಕು. ಈ ನಿಟ್ಟಿನಲ್ಲಿ ಪರಿಶ್ರಮದಿಂದ ಬದುಕು ಕಟ್ಟಿಕೊಂಡ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರ ಸೇವಾ ಮನೋಭಾವನೆ ಶ್ಲಾಘನೀಯ ಎಂದು ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರ ಸಂಪೂರ್ಣ ಖರ್ಚು ವೆಚ್ಚದಲ್ಲಿ ಭಾನುವಾರ ವಕ್ವಾಡಿಯ ಫಾರ್ಚೂನ್ ವಿಲೇಜ್ ಹೋಟೆಲ್ ಬಳಿ ಹಮ್ಮಿಕೊಂಡ ಉಚಿತ ಕಣ್ಣಿನ ತಪಾಸಣೆ ಹಾಗೂ ಆರೋಗ್ಯ ತಪಾಸಣೆ ಕಾರ್ಯಕ್ರಮ ಉದ್ಘಾಟಿಸಿ ಅವರು‌ ಮಾತನಾಡಿದರು.

Click Here

ಊರಿನಿಂದ ಶಿಕ್ಷಣ ಸಂಸ್ಕಾರ ಪಡೆದು ಪರ ಊರು ಸೇರಿದ ಮೇಲೆ ಹುಟ್ಟಿದ ಊರು, ಹೆತ್ತವರು, ಬಂಧುಗಳನ್ನು ಮರೆಯಬಾರದು. ಕನಸಿನ ಕನಸ್ಸು ಕಾಣಬೇಕು. ಜಗತ್ತಿನ ಭಾವನೆಗಳಿಗೆ ತೆರೆದುಕೊಳ್ಳಬೇಕು. ತಾವರೆ ಕೆಸರಿನಲ್ಲಿ ಹುಟ್ಟಿ ಹರನ ಮುಡಿ ಸೇರುವಂತೆ ನಾವು ಸೇರುವ ಗಮ್ಯಸ್ಥಾನ ಮುಖ್ಯವಾಗಿರುತ್ತದೆ. ಸಂಕಲ್ಪ ಸಿದ್ಧಿಯೊಂದಿಗೆ ಸಾಧನೆ ಮಾಡಬೇಕು ಎಂದು ಹೇಳಿದರು.

ಉಡುಪಿ ಪ್ರಸಾದ ನೇತ್ರಾಲಯದ ತಜ್ಞ ವೈದ್ಯರಿಂದ ಉಚಿತ ಕಣ್ಣಿನ ತಪಾಸಣೆ ಹಾಗೂ ಕುಂದಾಪುರ ರೂರಲ್ ಆಯುರ್ವೇದಿಕ್ ಮೆಡಿಕಲ್ ಕಾಲೇಜು ತಜ್ಞ ವೈದ್ಯರಿಂದ ಆರೋಗ್ಯ ತಪಾಸಣೆ ನಡೆಯಿತು. ಇದೇ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘದಿಂದ ಪ್ರವೀಣ್ ಕುಮಾರ್ ಶೆಟ್ಟಿ, ರೂಪಾಲಿ ಪ್ರವೀಣ್ ಕುಮಾರ್ ಶೆಟ್ಟಿಯವರನ್ನು ಸನ್ಮಾನಿಸಲಾಯಿತು.‌

ಕಾಳಾವರ ಗ್ರಾ.ಪಂ ಅಧ್ಯಕ್ಷೆ ಆಶಲತಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿಶ್ವ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಉಡುಪಿ ಪ್ರಸಾದ ನೇತ್ರಾಲಯದ ವೈದ್ಯಕೀಯ ನಿರ್ದೇಶಕ ಡಾ. ಕೃಷ್ಣಪ್ರಸಾದ್, ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಹುಟ್ಟೂರ ಸನ್ಮಾನ ಸಮಿತಿ ಅಧ್ಯಕ್ಷ ಬಸ್ರೂರು ಅಪ್ಪಣ್ಣ ಹೆಗ್ಡೆ, ಗೌರವಾಧ್ಯಕ್ಷ ಆನಂದ್ ಸಿ. ಕುಂದರ್, ಆರ್ಥಿಕ ಸಮಿತಿಯ ಉದಯಕುಮಾರ್ ಶೆಟ್ಟಿ ಬೈಲೂರು, ಜಾಗತಿಕ ಬಂಟರ ಸಂಘದ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಕುಂದಾಪುರ ರೂರಲ್ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಪ್ರಾಂಶುಪಾಲ ಡಾ. ಪ್ರಸನ್ನ ಐತಾಳ್, ಉದ್ಯಮಿ‌ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ, ತಂದೆ ನಾರಾಯಣ ಶೆಟ್ಟಿ, ಸರೋಜಿನಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಸತೀಶ್ ಪೂಜಾರಿ ವಕ್ವಾಡಿ‌ ಸ್ವಾಗತಿಸಿದರು. ಬಾಲಚಂದ್ರ ಶೆಟ್ಟಿ ಪ್ರಾರ್ಥಿಸಿದರು. ಬಾಲಕೃಷ್ಣ ಶೆಟ್ಟಿ ಪ್ರಸ್ತಾವಿಸಿದರು. ಅಕ್ಷತಾ ಗಿರೀಶ್ ಕಾರ್ಯಕ್ರಮ ನಿರೂಪಿಸಿ, ಸದಾನಂದ ಶೆಟ್ಟಿ ವಂದಿಸಿದರು.

Click Here

LEAVE A REPLY

Please enter your comment!
Please enter your name here