ಕುಂದಾಪುರ ಮಿರರ್ ಸುದ್ದಿ…
ಗಂಗೊಳ್ಳಿ : ಶ್ರೀ ಗುರುಜ್ಯೋತಿ ಸ್ಪೋಟ್ರ್ಸ್ ಕ್ಲಬ್ ಗಂಗೊಳ್ಳಿ ಇದರ 38ನೇ ವಾರ್ಷಿಕೋತ್ಸವದ ಅಂಗವಾಗಿ ರಕ್ತನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ ಉಡುಪಿ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ನಡೆಯಿತು.
ಶಿಬಿರದಲ್ಲಿ ಮಾಹಿತಿ ನೀಡಿ ಮಾತನಾಡಿದ ಉಡುಪಿ ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ವೀಣಾ ಕುಮಾರಿ, ರಕ್ತದಾನದ ಬಗ್ಗೆ ಜನರಲ್ಲಿ ಇದ್ದ ಸಂಶಯ, ಭಯ ದೂರವಾಗಿದ್ದು ಅನೇಕ ಮಂದಿ ಸ್ವಯಂಪ್ರೇರಿತರಾಗಿ ರಕ್ತದಾನ ಶಿಬಿರಗಳಲ್ಲಿ ಮತ್ತು ರಕ್ತನಿಧಿ ಕೇಂದ್ರಗಳಲ್ಲಿ ರಕ್ತದಾನ ಮಾಡುತ್ತಿರುವುದು ಉತ್ತಮ ಬೆಳವಣಿಗೆ. ರಕ್ತನಿಧಿ ಕೇಂದ್ರಗಳಲ್ಲಿ ಪ್ರತಿನಿತ್ಯ ರಕ್ತದ ಬೇಡಿಕೆ ಹೆಚ್ಚಾಗುತ್ತಿದ್ದು, ಯುವ ಜನರು ರಕ್ತದಾನ ಮಾಡುವುದು ಪ್ರತಿ ಆರೋಗ್ಯವಂತ ವ್ಯಕ್ತಿಯ ಕರ್ತವ್ಯ ಎಂದು ಭಾವಿಸಿ ಆಗಾಗ ರಕ್ತದಾನ ಮಾಡಬೇಕು ಎಂದರು.
ಶ್ರೀ ಗುರುಜ್ಯೋತಿ ಸ್ಪೋಟ್ರ್ಸ್ ಕ್ಲಬ್ ಅಧ್ಯಕ್ಷ ಸುಧಾಕರ ಖಾರ್ವಿ, ಗೌರವಾಧ್ಯಕ್ಷ ರಾಘವೇಂದ್ರ ಖಾರ್ವಿ, ಶ್ರೀಕಾಂತ ಬಿಲ್ಲವ, ಜಿ.ಗಂಗಾಧರ ಖಾರ್ವಿ, ಪ್ರದೀಪ ಖಾರ್ವಿ, ಗಂಗಾಧರ ಖಾರ್ವಿ ಬೇಲಿಕೇರಿ, ಮಧುಕರ ಖಾರ್ವಿ, ಕಮಲಾಕ್ಷ ಖಾರ್ವಿ, ಸಂಘದ ಸದಸ್ಯರು, ರಕ್ತನಿಧಿ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶಿಬಿರದಲ್ಲಿ ಸುಮಾರು 50 ಯೂನಿಟ್ ರಕ್ತ ಸಂಗ್ರಹಿಸಲಾಯಿತು.











