ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಡಾIಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಜಂಟಿ ಆಶ್ರಯದಲ್ಲಿ ಮಂಗಳೂರು ವಿ.ವಿ ಮಟ್ಟದ ಅಂತರ್ ಕಾಲೇಜು ಮಹಿಳೆಯರ ವಾಲಿಬಾಲ್ ಪಂದ್ಯಾಕೂಟವು ಫೆಬ್ರವರಿ 28ರಂದು ಕಾಲೇಜಿನ ಬಿ.ಎಮ್.ಎಸ್. ಕ್ರೀಡಾಂಗಣದಲ್ಲಿ ಉದ್ಘಾಟನೆಗೊಂಡಿತು.
ಸರಳ ವುಡ್ ಇಂಡಸ್ಟ್ರೀಸ್ ನಂದಳಿಕೆ ಕಾರ್ಕಳ ಇದರ ಮಾಲಕರಾದ ಸುಹಾಸ್ ಹೆಗ್ಡೆ ಪಂದ್ಯಾಕೂಟವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ. ಎಮ್. ಸುಕುಮಾರ್ ಶೆಟ್ಟಿಯವರು ವಹಿಸಿ, ನಮ್ಮ ಸಂಸ್ಥೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆಧ್ಯತೆ ನೀಡಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯ ಕುರಿತು ಕಾಳಜಿ ವಹಿಸುತ್ತಿದೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಉಡುಪಿ ಜಿಲ್ಲೆ ಇದರ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ, ಕುಂದಾಪುರ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಂಜಿತ್ ಟಿ.ಎನ್. ಹಾಗೂ ಕ್ರೀಡಾ ಸಂಘದ ಸಂಯೋಜಕರಾದ ಹರೀಶ್. ಬಿ ಉಪಸ್ಥಿತರಿದ್ದರು.
ಕಾಲೇಜಿನ ವಾಣಿಜ್ಯ ಉಪನ್ಯಾಸಕ ಸತೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಈ ಪಂದ್ಯಾಟದಲ್ಲಿ 27 ಕಾಲೇಜಿನ ಮಹಿಳಾ ತಂಡಗಳು ಭಾಗವಹಿಸಿದ್ದಾರೆ ಎಂದು ಸಂಸ್ಥೆ ತಿಳಿಸಿದೆ.











