ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ವಂಡ್ಸೆ ಶ್ರೀ ತಿರುಮಲ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ, ವಾರ್ಷಿಕ ಜಾತ್ರೆಯ ಸಂದರ್ಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ವಂಡ್ಸೆ ದಿ.ನಾರಾಯಣ ಗಾಣಿಗರ ಸ್ಮರಣಾರ್ಥ ನಾರಾಯಣ ಗಾಣಿಗ ಕುಟುಂಬಸ್ಥರು ಕೊಡಮಾಡಿದ ‘ವಂಡ್ಸೆ ನಾರಾಯಣ ಗಾಣಿಗ ಪ್ರಶಸ್ತಿ’ ಯನ್ನು ಹಿರಿಯ ಹಾಸ್ಯಕಲಾವಿದ ನಾಗಪ್ಪ ಹೊಳ್ಮಗೆ ಅವರಿಗೆ ಪ್ರದಾನ ಮಾಡಲಾಯಿತು.
ಹಿರಿಯ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ ಅವರು ಪ್ರಶಸ್ತಿ ಪ್ರದಾನ ಮಾಡಿ, ವಂಡ್ಸೆ ನಾರಾಯಣ ಗಾಣಿಗರು ತೆಂಕು ಬಡಗಿನಲ್ಲಿ ಸಲ್ಲಿಸಿದ ಸೇವೆ ಹಾಗೂ ಪ್ರಶಸ್ತಿ ಪುರಸ್ಕೃತರಾದ ಹಾಸ್ಯಗಾರ ನಾಗಪ್ಪ ಹೊಳ್ಮಗೆಯವರ ಕಲಾಸೇವೆಯನ್ನು ಪ್ರಶಂಸಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮೊಕ್ತೇಸರ ವಿ.ಕೆ ಶಿವರಾಮ ಶೆಟ್ಟಿ, ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗಿಳಿಯಾರು ಶ್ರೀಧರ ಶೆಟ್ಟಿ, ಗ್ರಾಮ ಪಂಚಾಯತ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಕೊಲ್ಲೂರು ದೇವಸ್ಥಾನ ಮಾಜಿ ಧರ್ಮದರ್ಶಿ ವಂಡಬಳ್ಳಿ ಜಯರಾಮ ಶೆಟ್ಟಿ, ಉದ್ಯಮಿ ಆನಂದ ಶೆಟ್ಟಿ ಸಬ್ಲಾಡಿ, ಉದಯ ಗಾಣಿಗ ಉಪಸ್ಥಿತರಿದ್ದರು.
ಶಿಕ್ಷಕ ಶಶಿಧರ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.











