ಕೋಟ- ಸಂಘಸಂಸ್ಥೆಗಳು ಸರಕಾರದ ಜನಪರ ಯೋಜನೆಗಳ ಅನುಷ್ಠಾನ ಶ್ಲಾಘನೀಯ- ಆನಂದ್ ಸಿ ಕುಂದರ್

0
792

Click Here

Click Here

ಕುಂದಾಪುರ ಮಿರರ್ ಸುದ್ದಿ…
ಕೋಟ: ಸಂಘಸಂಸ್ಥೆಗಳು ಸಮಾಜಮುಖಿ ಕಾರ್ಯದ ಜೊತೆ ಸರಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯ ಶ್ಲಾಘನೀಯ ಎಂದು ಕೋಟ ಅಮೃತೇಶ್ವರಿ ದೇವಳದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ ಕುಂದರ್ ಹೇಳಿದರು.

ಕೋಟದ ಅಮೃತೇಶ್ವರಿ ದೇವಳದ ಸಭಾಂಗಣದಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಕೋಟ ಇದರ ನೇತ್ರತ್ವದಲ್ಲಿ ಜಿ.ಎಸ್ ಇನ್ಫೋಟೇಕ್ ಡಿಜಿಟಲ್ ಸೇವಾ ಕೇಂದ್ರ ಸಾಲಿಗ್ರಾಮ ಸಂಯೋಜನೆಯೊಂದಿಗೆ ಗೀತಾನಂದ ಫೌಂಡೇಶನ್ ಮಣೂರು,ಗಿಳಿಯಾರು ಯುವಕ ಮಂಡಲ,ಗೆಳೆಯರ ಬಳಗ ಕಾರ್ಕಡ ಸಾಲಿಗ್ರಾಮ,ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಮಣೂರು ಫ್ರೆಂಡ್ಸ್,ಸಮುದ್ಯತಾ ಗ್ರೂಪ್ಸ್ ಕೋಟ ಸಹಯೋಗದೊಂದಿಗೆ ಬೃಹತ್ ಇ ಶ್ರಮ್ ಕಾಡ್9,ಮತದಾರರ ಗುರುತಿನ ಚೀಟಿ, ಪ್ಯಾನ್ ಕಾಡ್9,ಪಡಿತರ ಚೀಟಿ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿ ಸಾಮಾಜಿಕ ಬದ್ಧತೆ ಪ್ರದರ್ಶಿಸುವ ಸಂಘಟನೆಗಳು ಊರಿನಲ್ಲಿ ಹೆಚ್ಚು ಹೆಚ್ಚು ಹುಟ್ಟಿಕೊಳ್ಳಬೇಕು ಅಂತಹ ಗ್ರಾಮಗಳು ಸುಭಿಕ್ಷೆಯಾಗುವುದರಲ್ಲಿ ಸಂಶಯವೇ ಇಲ್ಲ ಎಂದು ಅಭಿಪ್ರಾಯಪಟ್ಟರು.

Click Here

ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಮೃತ್ ಜೋಗಿ ವಹಿಸಿದ್ದರು
ಮುಖ್ಯ ಅಭ್ಯಾಗತರಾಗಿ ಕೋಟ ಸಹಕಾರಿ ವ್ಯವಸಾಯಕ ಸಂಘ ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ ಶೆಟ್ಟಿ, ಪಂಚವರ್ಣ ಯುವಕ ಮಂಡಲದ ಗೌರವಾಧ್ಯಕ್ಷ ಸತೀಶ್ ಹೆಚ್ ಕುಂದರ್,ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ,ಮಣೂರು ಫ್ರೆಂಡ್ಸ್ ಅಧ್ಯಕ್ಷ ದಿನೇಶ್ ಆಚಾರ್ಯ, ಜಿ.ಎಸ್ ಇನ್ಫೋಟೇಕ್ ಡಿಜಿಟಲ್ ಸೇವಾಕೇಂದ್ರ ಸಾಲಿಗ್ರಾಮ ಮುಖ್ಯಸ್ಥ ಪ್ರಶಾಂತ್ ಆಚಾರ್ಯ, ಸಮುದ್ಯತ ಗ್ರೂಪ್ಸ್‍ನ ರಕ್ಷಿತಾ,ಗಿಳಿಯಾರು ಯುವಕ ಮಂಡಲದ ಸ್ಥಾಪಾಕಾಧ್ಯಕ್ಷ ಸುರೇಶ್ ಗಿಳಿಯಾರು,ಪಂಚವರ್ಣ ಯುವಕ ಮಂಡಲದ ಸ್ಥಾಪಾಕಾಧ್ಯಕ್ಷ ಸುರೇಶ್ ಗಾಣಿಗ ಶೇವಧಿ ಮತ್ತಿತರರು ಉಪಸ್ಥಿತರಿದ್ದರು.

ಪಂಚವರ್ಣ ಯುವಕ ಮಂಡಲದ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಪ್ರಾಸ್ತಾವನೆ ಸಲ್ಲಿಸಿ ಸ್ವಾಗತಿಸಿದರು.
ಕಾರ್ಯಕ್ರಮವನ್ನು ಪಂಚವರ್ಣ ಸಂಚಾಲಕ ಅಜಿತ್ ಆಚಾರ್ಯ ನಿರೂಪಿಸಿದರು. ವಿಪ್ರ ಮಹಿಳಾ ಬಳಗ ಸಾಲಿಗ್ರಾಮದ ಸುಜಾತ ಬಾಯರಿ ವಂದಿಸಿದರು.
ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಹಂದಟ್ಟು ಮಹಿಳಾ ಬಳಗ ,ಯಕ್ಷಸೌರಭ ಕಲಾರಂಗ ಸಹಕಾರ ನೀಡಿತ್ತು.

Click Here

LEAVE A REPLY

Please enter your comment!
Please enter your name here