ಗಂಗೊಳ್ಳಿಯಲ್ಲಿ ಬೆಂಕಿ ಅನಾಹುತ: ಮನೆಯೊಳಗೆ ಮಲಗಿದ ವ್ಯಕ್ತಿ ಸಜೀವ ದಹನ

0
2287

Click Here

Click Here

ಕುಂದಾಪುರ ಮಿರರ್ ಸುದ್ದಿ…

ಗಂಗೊಳ್ಳಿ : ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ವ್ಯಕ್ತಿಯೋರ್ವರು ಸಜೀವ ದಹನಗೊಂಡ ಘಟನೆ ಗಂಗೊಳ್ಳಿಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.

Click Here

ಗಂಗೊಳ್ಳಿ ಗ್ರಾಮದ ದೊಡ್ಡಹಿತ್ಲು ನಿವಾಸಿ ಗಣೇಶ್ ಖಾರ್ವಿ (45) ಮೃತಪಟ್ಟ ದುರ್ದೈವಿ. ಮೀನುಗಾರಿಕೆ ಬೋಟಿನಲ್ಲಿ ಕೆಲಸ ಮಾಡುತ್ತಿದ್ದ ಗಣೇಶ ಖಾರ್ವಿ ಇಂದು ಮುಂಜಾನೆ ಗಂಗೊಳ್ಳಿ ಬಂದರಿನಲ್ಲಿರುವ ಬೋಟಿನ ಸಮೀಪ ಹೋಗಿ ಪುನಃ ಮನೆಯಲ್ಲಿ ಬಂದು ಮಲಗಿದ್ದರು ಎನ್ನಲಾಗಿದೆ. ಇದೇ ಸಂದರ್ಭ ಬೆಳಿಗ್ಗೆ ಸುಮಾರು 8.30ರ ಹೊತ್ತಿಗೆ ಮನೆಯಲ್ಲಿ ಕಾಣಿಸಿಕೊಂಡ ಅಕಸ್ಮಿಕ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಗಣೇಶ ಖಾರ್ವಿ ಮಲಗಿದ್ದಲ್ಲೆ ಸುಟ್ಟು ಸಜೀವ ದಹನಗೊಂಡಿದ್ದಾರೆ. ಘಟನೆಗೆ ಸ್ಪಷ್ಟ ಕಾರಣ ಏನೆಂದು ತಿಳಿದಿಲ್ಲ. ಮೃತರು ಹೊಸ ಮನೆ ಕಟ್ಟುತ್ತಿದ್ದು ಮನೆ ಸಮೀಪದಲ್ಲೇ ಪುಟ್ಟ ಗುಡಿಸಲಿನಲ್ಲಿ ಪತ್ನಿ ಯಶೋಧಾ ಜೊತೆ ವಾಸಿಸುತ್ತಿದ್ದರು. ಇವರ ಪತ್ನಿ ಬೆಳಿಗ್ಗೆ ಕೆಲಸಕ್ಕೆ ಹೋಗಿದ್ದ ಸಂದರ್ಭ ಈ ಘಟನೆ ಸಂಭವಿಸಿದೆ. ಗಣೇಶ ಖಾರ್ವಿ ಮನೆಯಲ್ಲಿ ಕಾಣಿಸಿಕೊಂಡ ದಟ್ಟ ಹೊಗೆಯನ್ನು ಗಮನಿಸಿದ ಅಕ್ಕಪಕ್ಕದ ಮನೆಯವರು ಮನೆಗೆ ತಗುಲಿದ ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದು, ಗಣೇಶ ಖಾರ್ವಿ ಮನೆಯ ಒಳಗೆ ಇರುವುದು ಯಾರಿಗೂ ತಿಳಿದಿರಲಿಲ್ಲ. ಹೀಗಾಗಿ ಇವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ. ಸ್ಥಳೀಯರು ಮನೆಗೆ ಹೊತ್ತಿಕೊಂಡ ಬೆಂಕಿಯನ್ನು ನಂದಿಸುವಲ್ಲಿ ಯಶ್ವಸಿಯಾಗಿದ್ದಾರೆ.
ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸಂತೋಸ ಕಾಯ್ಕಿಣಿ, ವಂಡ್ಸೆ ಹೋಬಳಿ ಕಂದಾಯ ನಿರೀಕ್ಷಕ ರಾಘವೇಂದ್ರ ದೇವಾಡಿಗ, ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ನಂಜಾ ನಾಯ್ಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಂಗೊಳ್ಳಿ ಗ್ರಾಪಂ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ತಾಪಂ ಮಾಜಿ ಸದಸ್ಯ ಸುರೇಂದ್ರ ಖಾರ್ವಿ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಗಂಗೊಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Click Here

LEAVE A REPLY

Please enter your comment!
Please enter your name here