ಕುಂದಾಪುರ ಮಿರರ್ ಸುದ್ದಿ…
ಕೋಟ : ಡಾ. ಕಾರಂತ ಪ್ರತಿಷ್ಠಾನ ಕೋಟ, ಡಾ. ಕಾರಂತ ಟ್ರಸ್ಟ್ ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಕೊಡಮಾಡುವ ಕರಾವಳಿ ಕಣ್ಮಣಿ ದಿ. ಕೆ.ಸಿ ಕುಂದರ್ ಸ್ಮಾರಕ ದತ್ತಿ ಪುರಸ್ಕಾರಕ್ಕೆ ಯುವ ಉದ್ಯಮಿ, ಸಮಾಜ ಸೇವಕ ಕರಾವಳಿಯ ಕಾಮಧೇನು ಡಾ. ಗೋವಿಂದ ಬಾಬು ಪೂಜಾರಿ ಅವರನ್ನು ಆಯ್ಕೆಯಾಗಿದ್ದಾರೆ.
ತಳಮಟ್ಟದಿಂದ ಬೆಳೆದು ಯಶಸ್ವಿ ಉದ್ಯಮಿಯಾಗಿ ಸಾವಿರಾರು ಜನರಿಗೆ ಉದ್ಯೋಗ ಕಲ್ಪಿಸುವುದರ ಜೊತೆಗೆ ಶ್ರೀವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮೂಲಕ ಹಲವಾರು ಅಶಕ್ತರಿಗೆ ಸೂರು ಕಲ್ಪಿಸಿ,ಅನಾರೋಗ್ಯ ಪೀಡಿತರ ಆಶಾಕಿಣರ,ಕರಾವಳಿಯ ಕಾಮಧೇನು ಹೀಗೆ ಸಾಕಷ್ಟು ಬಿರುದಾಕಿಂತ ಡಾ.ಗೋವಿಂದಬಾಬು ಪೂಜಾರಿಯವರಿಗೆ ಇದೇ ಬರುವ ಎ.24ರಂದು ಕೋಟದ ಕಾರಂತ ಥೀಮ್ ಪಾರ್ಕ್‍ನಲ್ಲಿ ನಡೆಯುವ ಮಕ್ಕಳ ಬೇಸಿಗೆ ಶಿಬಿರದ ಸಮರೋಪ ಸಮಾರಂಭ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಪೂರ್ಣಿಮಾ, ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











