ಜಿಲ್ಲೆಯ ಎಲ್ಲಾ ರೈತರಗೆ ಕಿಸಾನ್ ಕ್ರೆಡಿಟ್ ಕಾರ್ಡ್ನ ಪ್ರಯೋಜನ ಒದಗಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್

0
844

Click Here

Click Here

ಕುಂದಾಪುರ ಮಿರರ್ ಸುದ್ದಿ…

ಉಡುಪಿ :ಜಿಲ್ಲೆಯ ಎಲ್ಲಾ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ನ ಸದುಪಯೋಗದ ಬಗ್ಗೆ ಅರಿವು ಮೂಡಿಸಿ, ಈ ಕಾರ್ಡ್ ನಿಂದ ಪಡೆಯಬಹುದಾದ ಸೌಲಭ್ಯಗಳನ್ನು , ಅರ್ಹ ಎಲ್ಲಾ ರೈತರಿಗೂ ಆದ್ಯತೆಯಲ್ಲಿ ವಿತರಿಸುವ ಬಗ್ಗೆ ಜಿಲ್ಲೆಯ ಎಲ್ಲಾ ಬ್ಯಾಂಕ್‌ಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು.

ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ “ ಕಿಸಾನ್ ಭಾಗೀದಾರಿ ಪ್ರಾಥಮಿಕ ಹಮಾರಿ” ವಿಶೇಷ ಕಾರ್ಯಕ್ರಮದ ಸಭೆಯ ಆಧ್ಯಕ್ಷತೆ ವಹಿಸಿ ಮಾತನಾಡಿದರು.

ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ರೈತರು 1,60,000.00 ಗಳ ವರೆಗೆ ಯಾವುದೇ ಗ್ಯಾರಂಟಿ ನೀಡದೇ ಬ್ಯಾಂಕ್ ಗಳಿಂದ ಸಾಲ ಪಡೆಯಬಹುದಾಗಿದ್ದು, ಇದರಿಂದ ಇತರೆ ವಾಣಿಜ್ಯ ಬ್ಯಾಂಕ್ ಗಳು ಮತ್ತು ಲೇವಾದೇವಿಗಾರರಿಂದ ಹೆಚ್ಚಿನ ಬಡ್ಡಿಗೆ ಸಾಲ ಪಡೆದು ತೊಂದರೆಗೀಡಾಗುವುದು ತಪ್ಪುತ್ತದೆ , ರೈತರನ್ನು ಕಿಸಾನ್ ಕಾರ್ಡ್ ಯೋಜನೆಗೆ ನೊಂದಣಿ ಮಾಡಲು ಏಪ್ರಿಲ್ 24 ರಿಂದ ಮೇ 1 ರವರೆಗೆ ನಡೆಯುವ ಬೃಹತ್ ಆಂದೋಲನದಲ್ಲಿ ಜಿಲ್ಲೆಯ ಎಲ್ಲಾ ರೈತರನ್ನು ಈ ಯೋಜನೆಯಡಿ ನೊಂದಣಿ ಮಾಡಿ,ಸೌಲಭ್ಯ ಒದಗಿಸುವಂತೆ ನಿದೇರ್ಶನ ನೀಡಿದರು.

Click Here

ಜಿಲ್ಲೆಯಲ್ಲಿ 1,63,439 ರೈತರು ಪ್ರೊಟ್ಸ್ ತಂತ್ರಾAಶದಲ್ಲಿ ನೊಂದಣಿಯಾಗಿದ್ದು, 55164 ಮಂದಿ ಕಿಸಾನ್ ಕ್ರೆಡಿಟ್ ಕಾರ್ಡ್ ಗಳನ್ನು ಪಡೆದಿದ್ದು, ಇನ್ನೂ 11,4033 ರೈತರು ಕಾಡ್ ð ಪಡೆಯಲು ಬಾಕಿ ಇದ್ದು, ಈ ರೈತರಿಗೆ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ನಡೆಯುವ ಗ್ರಾಮಸಭೆಗಳಲ್ಲಿ ಬ್ಯಾಂಕ್ ಆಧಿಕಾರಿಗಳು ಭಾಗವಹಿಸಿ ಈ ಬಗ್ಗೆ ಮಾಹಿತಿ ನೀಡುವ ಮೂಲಕ, ಬ್ಯಾಂಕ್ ಮಿತ್ರರ ಮೂಲಕ ಮೂಲಕ, ಡಿಜಿ ಪೇ ಸಖಿಯರ ಮೂಲಕ ರೈತರ ಮನೆ ಮನೆಗಳಿಗೆ ಭೇಟಿ ನೀಡಿ, ಯೋಜನೆಯ ಬಗ್ಗೆ ಅರಿವು ಮೂಡಿಸುವಂತೆ ತಿಳಿಸಿದರು.
ಎಲ್ಲಾ ಬ್ಯಾಂಕ್‌ಗಳು, ಈ ವಿಶೇಷ ಆಂದೋಲದನ ಅವಧಿಯಲ್ಲಿ ತಮ್ಮ ಬ್ರಾಂಚ್ ಗಳನ್ನು ವಾರದಲ್ಲಿ ಕನಿಷ್ಠ 2 ದಿನಗಳ ವಿಸೇಷ ಮೇಳಗಳನ್ನು ಆಯೋಜಸಿ,ರೈರತನ್ನು ನೊಂದಣಿ ಮಾಡಬೇಕು, ಎಲ್ಲಾ ಕೃಷಿ ಪ್ರಾಥಮಿಕ ಸಹಕಾರ ಸಂಘಗಳು ಮತ್ತು ರೈತಸೇವಾ ಕೇಂದ್ರಗಳ ಮೂಲಕ ಸಹ ಹೆಚ್ಚಿನ ಸಂಖ್ಯೆಯಲ್ಲಿ ರೈತರಿಗೆ ಈ ಬಗ್ಗೆ ಅರಿವು ಮೂಡಿಸಬೇಕು, ಪ್ರೂಟ್ಸ್ ತಂತ್ರಾಾಂಶದಲ್ಲಿ ನೊಂದಣಿಯಾಗಿರುವ ರೈತರಿಗೆ ಎಸ್.ಎಂ.ಎಸ್ ಸಂದೇಶಗಳನ್ನು ಕಳುಹಿಸುವಂತೆ ಕೃಷಿ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ಕಿಸಾನ್ ಕ್ರೆಡಿಟ್ ಕಾರ್ಡ್ ನೊಂದಣಿಗೆ ಬಾಕಿ ಇರುವ ರೈತರ ಪಟ್ಟಿಯನ್ನು ಪರಿಶೀಲಿಸಿ,ಸಂಬಂದಪಟ್ಟ ತಾಲೂಕುಗಳ ವ್ಯಾಪ್ತಿಯಲ್ಲಿನ ಬ್ಯಾಂಕ್ ಗಳು, ಎಲ್ಲಾ ರೈತನ್ನು ಯೋಜನೆಗೆ ನೊಂದಣಿ ಮಾಡುವ ಕುರಿತಂತೆ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಅದರಂತೆ ಕಾರ್ಯ ನಿರ್ವಹಿಸಿ ,ನಿಗಧಿತ ಅವಧಿಯೊಳಗೆ ನೊಂದಣಿಯನ್ನು ಮುಕ್ತಾಯಗೊಳಿಸುವಂತೆ ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಮಾತನಾಡಿ, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಮಸಭೆಗಳು ನಡೆಯಲಿದ್ದು, ಸಮೀಪದ ಬ್ಯಾಂಕ್ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಪ್ರಯೋಜನ ಬಗ್ಗೆ ಮಾಹಿತಿ ನೀಡಿ, ಎಲ್ಲಾ ಗ್ರಾಮ ಪಂಚಾಯತ್ ಪಿಡಿಓ ಗಳಿಗೆ ಸಹ ಈ ಬಗ್ಗೆ ಸೂಚನೆ ನೀಡಲಾಗುವುದು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವೀಣಾ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆಂಪೇಗೌಡ, ತೋಟಗಾರಿಕಾ ಇಲಾಖೆ ಉಪ ನಿರ್ದೇಶಕಿ ಭುವನೇಶ್ವರಿ, ಮೀನುಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಶಿವಕುಮಾರ್, ಲೀಡ್ ಬ್ಯಾಂಕ್ ಮೆನೇಜರ್ ಪಿಂಜಾರ , ಕೆನರಾ ಬ್ಯಾಂಕ್ ಪ್ರಾದೇಶಿಕ ಮೆನೇಜರ್ ಶ್ರೀಜಿತ್, ನಬಾಡ್ ð ನ ಪ್ರಾದೇಶಿಕ ಮೆನೇಜರ್ ಸಂಗೀತಾ ಕಾರ್ಥಾ, ಯೂನಿಯನ್ ಬ್ಯಾಂಕ್ ನ ಪ್ರಾದೇಶಿಕ ಮೆನೇಜರ್ ಡಾ.ವಾಸಪ್ಪ,ಕರ್ನಾಟಕ ಪ್ರಾದೇಶಿಕ ಮೆನೇಜರ್ ರಾಜ್ ಗೋಪಾಲ್ ಹಾಗೂ ಜಿಲ್ಲೆಯ ವಿವಿಧ ಬ್ಯಾಂಕ್ ಗಳ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here