ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಕಾರ್ಕಳ ಸಹಕಾರ ಅಭಿವೃದ್ದಿ ಅಧಿಕಾರಿ, ಕರ್ತವ್ಯ ನಿರ್ವಹಿಸುತ್ತಿದ್ದ ಅರುಣಕುಮಾರ್ ಎಸ್.ವಿ.ಯವರು ಸಹಕಾರ ಸಂಘಗಳ ಸಹಾಯಕ ನಿಬಂಧಕರಾಗಿ ಪದೋನ್ನತಿ ಹೊಂದಿದ್ದಾರೆ. ಪ್ರತಿಷ್ಠಿತ ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿ.,ಮಂಗಳೂರು ಇದರಲ್ಲಿ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಹಾಗೂ ವಸೂಲಾತಿ ಅಧಿಕಾರಿ ಆಗಿ ನಿಯುಕ್ತಿಗೊಂಡಿದ್ದಾರೆ.
ಮೇ 27-2022ರಂದು ಕಾರ್ಕಳ/ಕುಂದಾಪುರ ಕರ್ತವ್ಯದಿಂದ ಬಿಡುಗಡೆ ಹೊಂದಿದ್ದಾರೆ.
ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಯ ಸಹಕಾರಿ ಇಲಾಖೆಯಲ್ಲಿ ಸುದೀರ್ಘ ಅವಧಿಗೆ ಸೇವೆ ಸಲ್ಲಿಸಿರುವ ಇವರು, ಸೇವಾವಧಿಯಲ್ಲಿ ದಕ್ಷತೆ, ಪ್ರಾಮಾಣಿಕತೆ, ಕರ್ತವ್ಯನಿಷ್ಠೆಯಿಂದ ಸೇವೆ ಸಲ್ಲಿಸಿ ಗುರುತಿಸಿಕೊಂಡಿದ್ದಾರೆ. ದ್ವಿತೀಯ ದರ್ಜೆ ಸಹಾಯಕ, ನಿರೀಕ್ಷಕರು, ಹಿರಿಯ ನಿರೀಕ್ಷಕರು, ಮಾರಾಟಾಧಿಕಾರಿ, ಪ್ರಭಾರ ಸಹಾಯಕ ನಿಬಂಧಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ.
ಈ ಸಂದರ್ಭದಲ್ಲಿ ಸಹಕರಿಸಿದ ಸಹಕಾರಿ ಸಂಘಗಳ ಆಡಳಿತ ಮಂಡಳಿಯವರಿಗೆ, ಸಂಘದ ನೌಕರವೃಂದದವರಿಗೆ ಇಲಾಖೆಯ ಎಲ್ಲ ಅಧಿಕಾರಿಗಳಿಗೆ, ಸಹೋದ್ಯೋಗಿಗಳಿಗೆ ಅರುಣಕುಮಾರ್ ಎಸ್.ವಿ.ಯವರು ಕೃತಜ್ಞತೆಯನ್ನು ಅರ್ಪಿಸಿದ್ದಾರೆ.











