ಕುಂದಾಪುರ ಮಿರರ್ ಸುದ್ದಿ…
ಕೋಟ: ಗಿಡ ಮರದ ಪೋಷಣೆಯ ಜೊತೆ ತ್ಯಾಜ್ಯ ಮುಕ್ತ ಸಮಾಜಕ್ಕೆ ಯುವ ಸಮುದಾಯ ಮುಂದಾಗಬೇಕಿದೆ ಎಂದು ಕೋಟತಟ್ಟು ಗ್ರಾಮಪಂಚಾಯತ್ ಸದಸ್ಯ ಪ್ರಕಾಶ್ ಹಂದಟ್ಟು ಹೇಳಿದ್ದಾರೆ.

ಪಂಚವರ್ಣ ಯುವಕ ಮಂಡಲ ಕೋಟ ಹಾಗೂ ಅದರ ಅಧೀನಕ್ಕೊಳಪಟ್ಟ ಮಹಿಳಾ ಮಂಡಲದ ನೇತ್ರತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು,ಗಿಳಿಯಾರು ಯುವಕ ಮಂಡಲ,ಮಣೂರು ಫ್ರೆಂಡ್ಸ್,ಯಕ್ಷಸೌರಭ ಕಲಾರಂಗ ಕೋಟ,ಹಂದಟ್ಟು ಮಹಿಳಾ ಬಳಗ,ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ,ರೋಟರಿ ಕ್ಲಬ್ ಕೋಟ ಸಾಲಿಗ್ರಾಮ,ಇವರುಗಳ ಸಂಯುಕ್ತ ಸಹಯೋಗದೊಂದಿಗೆ 122ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನ ಹಾಗೂ ವಿಶ್ವಪರಿಸರ ದಿನದ ಅಂಗವಾಗಿ ಹಂದಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಂಯೋಜನೆಯೊಂದಿಗೆ ಮನೆಗೊಂದು ಗಿಡ ವಿತರಣೆ ಹಾಗೂ ನಡುವ ಕಾರ್ಯಕ್ರಮದಲ್ಲಿ ಮಾತನಾಡಿ ಪ್ರಸ್ತುತ ದಿನಗಳಲ್ಲಿ ಗಿಡ ನಡುವುದರಿಂದ ನಮ್ಮ ನಮ್ಮ ಪರಿಸರವನ್ನು ಹಸಿರಾಗಸಬಹುದಲ್ಲದೆ ಶುದ್ಧ ಗಾಳಿ ವಾತಾವರಣ ಸೃಷ್ಟಿಸಬಹುದಾಗಿದೆ ಹಾಗೂ ಪಂಚವರ್ಣ ಯುವಕ ಮಂಡಲದ ಈ ನಿರಂತರ ಅಭಿಯಾನದ ಬಗ್ಗೆ ಅಭಿನಂದನೆ ಸಲ್ಲಿಸಿದರು.
ಅಧ್ಯಕ್ಷತೆಯನ್ನು ಹಂದಟ್ಟು ಹಾಲು ಉತ್ಪಾದಕ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಜಾನಕಿ ಹಂದೆ ವಹಿಸಿದ್ದರು.
ಮುಖ್ಯ ಅಭ್ಯಾಗತರಾಗಿ ಕೋಟ ಗ್ರಾಮಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ,ಕೋಟತಟ್ಟು ಗ್ರಾಮಪಂಚಾಯತ್ ಉಪಾಧ್ಯಕ್ಷ ವಾಸು ಪೂಜಾರಿ,ಸದಸ್ಯೆ ಪೂಜಾ ಪೂಜಾರಿ,ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಮೃತ್ ಜೋಗಿ,ಕಾರ್ಯದರ್ಶಿ ನಿತೀನ್ ಕೋಟ,ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಕಲಾವತಿ ಅಶೋಕ್,ಕಾರ್ಯದರ್ಶಿ ಲಲಿತಾ ಪೂಜಾರಿ,ಮಣೂರು ಫ್ರೆಂಡ್ಸ್ ಅಧ್ಯಕ್ಷ ದಿನೇಶ್ ಆಚಾರ್ಯ, ಕೋಟ ಯಕ್ಷ ಸೌರಭ ಕಲಾರಂಗದ ಸತ್ಯನಾರಾಯಣ ಆಚಾರ್ಯ,ಪಂಚವರ್ಣದ ಸಂಚಾಲಕ ಅಜಿತ್ ಆಚಾರ್ಯ,ಹಂದಟ್ಟು ಮಹಿಳಾ ಬಳಗದ ಅಧ್ಯಕ್ಷೆ ಪುಷ್ಭಾ ಕೆ ಮತ್ತಿತರರು ಉಪಸ್ಥಿತರಿದ್ದರು. ಹಂದಟ್ಟು ಹಾಲು ಉತ್ಪಾದಕ ಮಹಿಳಾ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಸುಜಾತ ಬಾಯರಿ ಸ್ವಾಗತಿಸಿದರು. ಪಂಚವರ್ಣ ಯುವಕ ಮಂಡಲದ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ನಿರೂಪಿಸಿದರು.











