ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ನೆಲ- ಜಲ, ಮರ – ಗಿಡ ಎಲ್ಲವನ್ನೂ ಪೋಷಿಸುವ ಮೂಲಕ, ಪರಿಸರವನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ ಎಂದು ಕುಂದಾಪುರ ಉಪವಿಭಾಗದ ಡಿವೈಎಸ್ಪಿ ಶ್ರೀಕಾಂತ್ ಕೆ. ಹೇಳಿದರು.


ಅವರು ಇಲ್ಲಿನ ನಿವೇದಿತಾ ಪ್ರೌಢಶಾಲೆ ಬಸ್ರೂರುನಲ್ಲಿ ನಡೆದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ ಕಂಡ್ಲೂರು, ನಿವೇದಿತಾ ಪ್ರೌಢಶಾಲೆ ಬಸ್ರೂರು “ಅರೋರ” ಇಕೋ ಕ್ಲಬ್, ಪರಿಸರ ಸಂರಕ್ಷಣೆಯ ಅಂಗವಾಗಿ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ವಿಧ್ಯಾರ್ಥಿಗಳ ಜೊತೆ ವನಮೋಹತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಹೆಚ್ಚಾಗುತ್ತಿರುವ ವಾಣಿಜ್ಯ ಉದ್ಯಮಗಳು, ವಾಹನಗಳ ಸಂಖ್ಯೆ ಮತ್ತು ಹೆಚ್ಚುತ್ತಿರುವ ಜನಸಂಖ್ಯೆ ಮುಂತಾದ ಚಟುವಟಿಕೆಗಳಿಂದ ಪರಿಸರ ಮಾಲಿನ್ಯವಾಗಿ ಗಾಳಿ, ಭೂಮಿ ಮತ್ತು ನೀರು ವಿಷಪೂರಿತವಾಗುತ್ತಿದೆ. ಪರಿಸರ ಉಳಿಸಿ ಬೆಳೆಸುವ ಮೂಲಕ ಪರಿಸರ ಮಾಲಿನ್ಯ ತಡೆಯಲು ಸಾಧ್ಯ ಎಂದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಸಿಗಳನ್ನು ವಿತರಿಸಲಾಯಿತು.
ಬಸ್ರೂರು ಶಾಲೆಯ ಅಧ್ಯಾಪಕ ಸುಬ್ಬಣ್ಣ ಕೋಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಠಾಣಾಧಿಕಾರಿ ನಿರಂಜನ್ ಗೌಡ, ತನಿಖಾ ವಿಭಾಗದ ಉಪನೀರಿಕ್ಷಕ ಸುಹಾಸ್ ಕೆ., ಕುಂದಾಪುರ ತಾ.ಪಂ.ಮಾಜಿ ಉಪಾಧ್ಯಕ್ಷ ರಾಮ್ ಕೀಶನ್ ಹೆಗ್ಡೆ, ವಸಂತ ಉಡುಪ, ಉದಯ್ ಕುಮಾರ್, ಪ್ರದೀಪ್ ಶೆಟ್ಟಿ, ವಿಜ್ಞಾನ ವಿಭಾಗದ ಶಿಕ್ಷಕಿ ಸರೋಜ, ಮೊದಲಾದವರು ಉಪಸ್ಥಿತರಿದ್ದರು.











