ಕೋಟತಟ್ಟು- ಮುಖ್ಯ ಶಿಕ್ಷಕರಾಗಿ ಭಡ್ತಿ ಹೊಂದಿದ ಮಹೇಶ್ಚಂದ್ರ ಶೆಟ್ಟಿಯವರಿಗೆ ಬೀಳ್ಕೊಡುಗೆ ಸಮಾರಂಭ

0
326

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕೋಟ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಟತಟ್ಟು ಪಡುಕರೆ ಇಲ್ಲಿನ ಸಹ ಶಿಕ್ಷಕರಾಗಿ, ಮುಖ್ಯ ಶಿಕ್ಷಕರಾಗಿ ಭಡ್ತಿ ಹೊಂದಿದ ಮಹೇಶ್ಚಂದ್ರ ಶೆಟ್ಟಿಯವರಿಗೆ ಬೀಳ್ಕೊಡುಗೆ ಸಮಾರಂಭ ಶಾಲಾ ಸಭಾಂಗಣದಲ್ಲಿ ಆಯೋಜಿಸಲಾಯಿತು.

ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಸುಲೈಮಾನ್ ಅಧ್ಯಕ್ಷತೆ ವಹಿಸಿದ್ದರು. ಪದನ್ನೋತ್ತಿ ಹೊಂದಿದ ಮಹೇಶ್ಚಂದ್ರ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ವಿವಿಧ ಸಂಘಗಳ ಉದ್ಘಾಟನೆಯನ್ನು ಬ್ರಹ್ಮಾವರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರಾಮಚಂದ್ರ ಐತಾಳ ರಾಮಚಂದ್ರ ಐತಾಳ ನೆರವೇರಿಸಿದರು.

Click Here

1ನೇ ತರಗತಿಗೆ ದಾಖಲಾದ ವಿದ್ಯಾರ್ಥಿಗಳಿಗೆ ಬೆಲ್ಟ್ ಮತ್ತು ಸಮವಸ್ತ್ರ ಶಾಲಾ ವತಿಯಿಂದ ನೀಡಲಾಯಿತು. ಮುಖ್ಯ ಅತಿಥಿಗಳಾಗಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶಿವಮೂರ್ತಿ ಉಪಾಧ, ಸಹ ಶಿಕ್ಷಕ ಅರವಿಂದ ಹೆಬ್ಬಾರ್, ಗೌರವ ಶಿಕ್ಷಕಿ ಶೈಲಜಾ , ಅಂಗನವಾಡಿ ಕಾರ್ಯಕರ್ತೆ ರಮಾದೇವಿ ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕಿ ಜಾನಕಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಶಿಕ್ಷಕ ಗಣೇಶ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.ಶಿಕ್ಷಕಿ ಸಂಗೀತ ಎಸ್. ಕೆ. ಧನ್ಯವಾದಗೈದರು.

Click Here

LEAVE A REPLY

Please enter your comment!
Please enter your name here