3ನೇ ಹಣಕಾಸು ಆಯೋಗದ ಅಧ್ಯಕ್ಷ, ಮಾಜಿ ಶಾಸಕ, ಕರಾವಳಿಯ ರಾಜಕೀಯದ ಭೀಷ್ಮ ಎ.ಜಿ ಕೊಡ್ಗಿ ನಿಧನ

0
616

Click Here

Click Here

ಕುಂದಾಪುರ ಮಿರರ್ ‌ಸುದ್ದಿ…

ಕುಂದಾಪುರ: ಮಾಜಿ ಶಾಸಕ, 3ನೇ ಹಣಕಾಸು ಆಯೋಗದ ಅಧ್ಯಕ್ಷ, ಹಣಕಾಸು ಆಯೋಗದ ಅನುಷ್ಠಾನ ಸಮಿತಿಯ ಅಧ್ಯಕ್ಷ ಎ.ಜಿ ಕೊಡ್ಗಿ (93 ವ) ಇನ್ನಿಲ್ಲ.

ಅವರು ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ಅವರು ಸೋಮವಾರ ನಿಧನರಾಗಿದ್ದಾರೆ.

Click Here

ಅಮಾಸೆಬೈಲು ಕೃಷಿಕ ಕುಟುಂಬದಲ್ಲಿ ಸ್ವಾತಂತ್ರ್ಯಹೋರಾಟಗಾರ ಕೃಷ್ಣರಾಯ ಕೊಡ್ಗಿ ಅವರ ಪುತ್ರರಾಗಿ 1929ರ ಅಕ್ಟೋಬರ್ 1 ರಂದು ಜನಿಸಿದ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ ಅವರು ತಾಲೂಕು ಬೋರ್ಡ್ ಅಧ್ಯಕ್ಷ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಇವರು ಎಂಟು ವರ್ಷ ತಾಲೂಕು ಬೋರ್ಡ್ ಸದಸ್ಯರಾಗಿದ್ದರು. ಮಂಗಳೂರು ಜಿಲ್ಲಾ ಪರಿಷತ್ ಸದಸ್ಯ, ಆರ್ಥಿಕ ಸಮಿತಿ ಸದಸ್ಯ, 1972-83ರ ತನಕ ಬೈಂದೂರು ಶಾಸಕರಾಗಿ ಸೇವೆ ಸಲ್ಲಿಸಿದ್ದರು. 2006-08ರ ತನಕ ರಾಜ್ಯ ಮೂರನೇ ಹಣಕಾಸು ಆಯೋಗ ಅಧ್ಯಕ್ಷ, ಬಳಿಕ ಅದರ ಕಾರ್ಯಪಡೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಶಂಕರನಾರಾಯಣ ಸಿ‌ಎ ಬ್ಯಾಂಕ್ ಅಧ್ಯಕ್ಷ, ಎಪಿ‌ಎಂಪಿ ಅಧ್ಯಕ್ಷ, ಮಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ, ಸ್ಕ್ಯಾಮ್ಸ್ ನಿರ್ದೇಶಕ, ಮಂಗಳೂರು ಎಪಿ‌ಎಂಸಿ ಅಧ್ಯಕ್ಷ ಅಲ್ಲದೆ ರಾಜ್ಯ ಮಾರ್ಕೆಟಿಂಗ್ ಬೋರ್ಡ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. 1982-1990ರ ತನಕ ಕರ್ಣಾಟಕ ಬ್ಯಾಂಕ್ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.

ಕರಾವಳಿ ಭಾಗದ ರಾಜಕೀಯ ಮುತ್ಸದ್ಧಿ ಎನಿಸಿಕೊಂಡಿದ್ದ ಕೊಡ್ಗಿಯವರು ತನ್ನ ಇಳಿ ವಯಸ್ಸಿನಲ್ಲಿಯೂ ಸಭೆ ಸಮಾರಂಭಗಳಲ್ಲಿ ಭಾಗವಹಿಸುತ್ತಿದ್ದರು. ಮೃತರು ಪತ್ನಿ, ಐವರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

Click Here

LEAVE A REPLY

Please enter your comment!
Please enter your name here