ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಹಟ್ಟಿಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕನ್ಯಾನ ಗ್ರಾಮದ ತೋಟಬೈಲು ಪ್ರದೇಶದ ಮಹಾವಿಷ್ಣು ದೇವಸ್ಥಾನಕ್ಕೆ ಹೋಗುವ ಸಂಪರ್ಕ ರಸ್ತೆಯಿಂದ ತೋಟಬೈಲು, ಗಾಣಿಗರಕೇರಿಗೆ ಹೋಗುವ ಅನಾದಿ ಕಾಲದ ಸಂಪರ್ಕ ರಸ್ತೆಯನ್ನು ಹಟ್ಟಿಯಂಗಡಿ ಗ್ರಾಮ ಪಂಚಾಯತ್ ಅಭಿವೃದ್ದಿಗೊಳಿಸಿದೆ.
ತೋಟಬೈಲು ಪ್ರದೇಶ, ಗಾಣಿಗರ ಕೇರಿ, ಪರಿಸರದಲ್ಲಿ 35ಕ್ಕೂ ಹೆಚ್ಚು ಮನೆಗಳಿದ್ದು, ಈ ಭಾಗದ ಜನರು, ವಿದ್ಯಾರ್ಥಿಗಳು ಈ ರಸ್ತೆಯ ಮೂಲಕವೇ ಮುಖ್ಯರಸ್ತೆಗೆ ಬರುತ್ತಾರೆ. ಮಹಾವಿಷ್ಣು ದೇವಸ್ಥಾನಕ್ಕೆ ಹೋಗುವ ರಸ್ತೆಯಿಂದ ತೋಟಬೈಲು ಪ್ರದೇಶಕ್ಕೆ ಹೋಗುವ ಪ್ರಮುಖ ರಸ್ತೆ ಇದಾಗಿದ್ದು, ಈ ಹಿಂದೆ ಅತಿಕ್ರಮಣಕ್ಕೆ ಒಳಗಾಗಿದ್ದು ಕಳೆದ ವರ್ಷ ಕಂದಾಯ ಇಲಾಖೆ ಅತಿಕ್ರಮಣ ತೆರವುಗೊಳಿಸಿ ಸಾರ್ವಜನಿಕರಿಗೆ ಮುಕ್ತಗೊಳಿಸಿತ್ತು.

ಈಗ ರಸ್ತೆಯ ಅಭಿವೃದ್ದಿಗೆ ಗ್ರಾಮ ಪಂಚಾಯತ್ ಮುಂದಾಗಿದ್ದು, ಜೂ. 17ರಂದು ರಸ್ತೆಗೆ ಪೂರಕವಾಗಿ ಚರಂಡಿ ನಿರ್ಮಾಣ ಮಾಡಲಾಯಿತು. ಮುಂದೆ ರಸ್ತೆಯನ್ನು ಸಿಮೆಂಟ್ ರಸ್ತೆಯಾಗಿ ಅಭಿವೃದ್ದಿ ಪಡಿಸುವ ಬಗ್ಗೆ ಶಾಸಕರಿಗೆ ಮನವಿ ಮಾಡಲಾಗಿದ್ದು ಶೀಘ್ರ ಅದು ಈಡೇರಲಿದೆ.
ಈ ಸಂದರ್ಭದಲ್ಲಿ ಗಾಮ ಪಂಚಾಯತ್ ಅಧ್ಯಕ್ಷೆ ಅಮೃತಾ ಪಿ ಭಂಡಾರಿ, ಉಪಾಧ್ಯಕ್ಷ ಪ್ರತಾಪ ಕುಮಾರ್ ಶೆಟ್ಟಿ, ಸದಸ್ಯರಾದ ಕೆ.ರಾಜೀವ ಶೆಟ್ಟಿ, ವಿಠಲ ಶೆಟ್ಟಿ, ಲೀಲಾವತಿ ಗಾಣಿಗ, ಕಂಡ್ಲೂರು ಆರಕ್ಷಕ ಠಾಣೆಯ ಎಸ್.ಐ, ನಿರಂಜನ್ ಗೌಡ ಬಿ.ಎಸ್., ಅಭಿವೃದ್ದಿ ಅಧಿಕಾರಿ ಮಂಜುನಾಥ ಸಿ, ಮಾಜಿ ಗ್ರಾ.ಪಂ ಸದಸ್ಯರಾದ ಸಂತೋಷ ಶೆಟ್ಟಿ ತೋಟಬೈಲು, ಕಂದಾಯ ನಿರೀಕ್ಷಕರಾದ ರಾಘವೇಂದ್ರ, ಗ್ರಾಮ ಲೆಕ್ಕಾಧಿಕಾರಿ ಧೀರಜ್ ಗ್ರಾಮಸ್ಥರು ಉಪಸ್ಥಿತರಿದ್ದರು.











