ಕುಂದಾಪುರ ಮಿರರ್ ಸುದ್ದಿ…
ಕೋಟ: ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ-ಪಡುಕೆರೆ ಇಲ್ಲಿನ ಸಮಾಜಕಾರ್ಯ ವಿಭಾಗ ಮತ್ತು ರಾಷ್ಟ್ರೀಯ ಸೇವಾಯೋಜನೆ ಘಟಕ 1 & 2 ವತಿಯಿಂದ ಅಂತರಾಷ್ಟ್ರೀಯ ಮಾದಕವ್ಯಸನ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನದ ಪ್ರಯುಕ್ತ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಕೋಟ ಪೋಲಿಸ್ ಠಾಣೆಯ ಆರಕ್ಷಕ ಉಪ ನಿರೀಕ್ಷಕ ಮಧು ಬಿ ಇವರು, ವಿದ್ಯಾರ್ಥಿಗಳು ಜೀವನವನ್ನು ರೂಪಿಸಿಕೊಳ್ಳುವಲ್ಲಿ ತಮ್ಮ ಗಮನ ಹರಿಸಬೇಕು, ಭವ್ಯ ಭಾರತದ ಸತ್ಪ್ರಜೆಗಳಾಗಿ ಬಾಳಬೇಕು. ಮಾದಕ ವ್ಯಸನವು ಒಂದು ವ್ಯಸನವಾಗಿದ್ದು ಇಂತಹ ದುಶ್ಚಟಗಳಿಂದ ದೂರವಿರುವುದರೊಂದಿಗೆ, ಮಾದಕ ವ್ಯಸನಕ್ಕೆ ಸಂಬಂಧಿಸಿದಂತಹ ಕಾಯಿದೆಗಳನ್ನು ವಿವರಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಮಾದಕವ್ಯಸನದ ವಿರುದ್ಧ ಅರಿವು ಮೂಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ವಿ ಗಾಂವಕರ ವಹಿಸಿದ್ದರು.
ಸಮಾಜಕಾರ್ಯದ ಮುಖ್ಯಸ್ಥರಾದ ಅನಂತ್‍ಕುಮಾರ್ ಸಿ.ಎಸ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ.ಮನೋಜ್‍ಕುಮಾರ್.ಎಮ್ ವಂದಿಸಿದರು. ಕಾಲೇಜಿನ ಐ.ಕ್ಯೂ.ಎ.ಸಿ ಸಂಚಾಲಕರು ಡಾ. ಸುಬ್ರಹ್ಮಣ್ಯ.ಎ ಮತ್ತು ಪ್ರೊಬೇಷನರಿ ಆರಕ್ಷಕ ಉಪನಿರೀಕ್ಷರಾದ ಶ್ರೀ ಪುನೀತ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಕುಮಾರಿ ಶ್ವೇತಾ ಸ್ವಾಗತಿಸಿದರು. ಮೇಘಾ ಕಾರ್ಯಕ್ರಮ ನಿರೂಪಿಸಿದರು.











