ಕುಂದಾಪುರ ಮಿರರ್ ಸುದ್ದಿ…
ಕೋಟ: ಪಠ್ಯದ ಜೊತೆಗೆ ಸಹಪಠ್ಯ ಹಾಗೂ ಪಠ್ಯ ಪೂರಕ ಚಟುವಟಿಕೆಗಳಿಗೂ ವಿಶೇಷ ಆದ್ಯತೆ ನೀಡಿ ಮಕ್ಕಳನ್ನು ಪ್ರೋತ್ಸಾಹಿಸುತ್ತಿರುವ ಹೆಸಕುತ್ತೂರು ಪ್ರಾಥಮಿಕ ಶಾಲೆಯ ಪ್ರಯತ್ನ ನಿಜಕ್ಕೂ ಅಭಿನಂದನೀಯ” ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದರಾದ ನರಾಡಿ ಭೋಜರಾಜ ಶೆಟ್ಟಿ ನುಡಿದರು. ಅವರು ಹೆಸಕುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಆರಂಭಿಸಲಾದ ಭರತನಾಟ್ಯ ತರಗತಿಯನ್ನು ಉದ್ಘಾಟಿಸಿ ಮಾತನಾಡಿದರು.
ಶಾಲಾ ಎಸ್‍ಡಿಎಂಸಿ ಅಧ್ಯಕ್ಷರಾದ ಕೃಷ್ಣ ಕೆದ್ಲಾಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರಾಜ್ಯ ಪ್ರಶಸ್ತಿ ಪುರಸ್ಕ್ರತ ನಿವೃತ್ತ ಮುಖ್ಯ ಶಿಕ್ಷಕ ಚಂದ್ರಶೇಖರ ಶೆಟ್ಟಿ ಕೆ ಎನ್, ಭರತನಾಟ್ಯ ಗುರುಗಳಾ ವಿದುಷಿ ಪ್ರೀತಿ ಪುರುಷೋತ್ತಮ, ಕುಂದಾಪುರದ ಸರ್ವೇ ಇಲಾಖೆಯ ಭೂಮಾಪನ ಪರ್ಯಾವೇಕ್ಷಕ ಅಧಿಕಾರಿ ಪುರುಷೋತ್ತಮ್, ಶಾಲಾ ಸಹಶಿಕ್ಷಕರಾದ ಸಂಜೀವ ಎಂ, ಜಯರಾಮ ಶೆಟ್ಟಿ, ವಿಜಯಾ ಆರ್, ವಿಜಯ ಶೆಟ್ಟಿ, ರವೀಂದ್ರ ನಾಯಕ್, ಗೌರವ ಶಿಕ್ಷಕಿ ಮಧುರಾ ಹಾಗೂ ಪೋಷಕರು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕ ಶೇಖರಕುಮಾರ ಸ್ವಾಗತಿಸಿದರು. ಸಹಶಿಕಕ್ಷಕಿ ಜಯಲಕ್ಷ್ಮಿ ಬಿ ವಂದಿಸಿದರು. ಅಶೋಕ ತೆಕ್ಕಟ್ಟೆ ಕಾರ್ಯಕ್ರಮ ನಿರ್ವಹಿಸಿದರು.











