ಕುಂದಾಪುರ ಮಿರರ್ ಸುದ್ದಿ…
ಉಡುಪಿ: ಜಿಲ್ಲೆಯಲ್ಲಿ ಸತತ ಮೂರು ದಿನಗಳಿಂದ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ ಜು.1 ರಂದು ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದ್ದು,ನಾಳೆ ಅಸಹಜವಾಗಿ ಹೆಚ್ಚಿನ ಮಳೆಯಾಗುವ ನಿರೀಕ್ಷೆ ಇರುವ ಕಾರಣ ಸಾರ್ವಜನಿಕ ಹಿತಾಸಕ್ತಿಯನ್ನು ಪರಿಗಣಿಸಿ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳು, ಪಿಯು ಮತ್ತು ಪದವಿ ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮ ರಾವ್ ತಿಳಿಸಿದ್ದಾರೆ.











