ಕುಂದಾಪುರ :ಪಂಚಾಯತ್ ರಾಜ್ ತಜ್ಞ ಎಸ್.ಜನಾರ್ದನ್ ಮರವಂತೆ ಇನ್ನಿಲ್ಲ

0
111

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಕರ್ನಾಟಕ ರಾಜ್ಯ ಕಂಡ ಶ್ರೇಷ್ಠ ಪಂಚಾಯತ್ ರಾಜ್ ತಜ್ಞ, ಹಿರಿಯ ಪತ್ರಕರ್ತ ಎಸ್.ಜನಾರ್ದನ್ ಮರವಂತೆ (88ವ) ವಯೋಸಹಜ ಕಾರಣದಿಂದ ಜೂನ್ 6 ಶನಿವಾರ ಬೆಳಿಗ್ಗೆ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೂರು ದಶಕಗಳ ಕಾಲ ಶಿಕ್ಷಣ ಕ್ಷೇತ್ರದಲ್ಲಿ ದುಡಿದ ಅವರು ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಸುದೀರ್ಘ 25ಕ್ಕೂ ಹೆಚ್ಚು ವರ್ಷಗಳ ಕಾಲ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ, ತಜ್ಞರಾಗಿ ಸೇವೆ ಸಲ್ಲಿಸಿದ್ದರು. ಪಂಚಾಯತ್ ರಾಜ್ ವಿಷಯದಲ್ಲಿ ಅವರು ಅನೇಕ ಕೃತಿಗಳನ್ನು ರಚಿಸಿದ್ದು ಜನಾಧಿಕಾರ ಪುಸ್ತಕ ಇಡೀ ಪಂಚಾಯತ್ ರಾಜ್ ವ್ಯವಸ್ಥೆಗೆ ಕೈಪಿಡಿ ಆಗಿತ್ತು. ಮರವಂತೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪತ್ರಕರ್ತರಾಗಿಯೂ ಸೇವೆ ಸಲ್ಲಿಸಿದ್ದ ಅವರು ಬೈಂದೂರು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

Click Here

ಮೃತರು ಇಬ್ಬರು ಪುತ್ರರನ್ನು ಅಗಲಿದ್ದಾರೆ.

ನಾಳೆ ಅಂತಿಮ ದರ್ಶನ:
ಮೃತರ ಅಂತಿಮ ದರ್ಶನ ಜೂನ್ 7 ಆದಿತ್ಯವಾರ ಬೆಳಿಗ್ಗೆ 8 ಗಂಟೆಯಿಂದ ಮಧಾಹ್ನ 3 ಗಂಟೆಯ ತನಕ ಮರವಂತೆಯ ಸಾಧನ ಸಭಾಂಗಣದಲ್ಲಿ ವ್ಯವಸ್ಥೆ ಮಾಡಲಾಗಿದೆ.

Click Here

LEAVE A REPLY

Please enter your comment!
Please enter your name here