ಕುಂದಾಪುರ ಮಿರರ್ ಸುದ್ದಿ…
ಕೊಲ್ಲೂರು :ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್ 12 ರಂದು ಪ್ರಸಿದ್ಧ ಕೊಲ್ಲೂರು ಮೂಕಾಂಬಿಕ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.
ಶುಕ್ರವಾರ ಬೆಳಗ್ಗೆ 12.30 ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸಲಿರುವ ವಿಜಯ್ ಸಂಜೆ 3 ಗಂಟೆಗೆ ದೇವಾಲಯದಲ್ಲಿ ವಿಶೇಷ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ.
ಸಂಚರಿಸಲಿರುವ ರಸ್ತೆ ಮಾರ್ಗ ಮತ್ತು ದೇವಾಲಯದಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ.












