ಜೂನ್ 17: ಕುಂದಾಪುರ ತಾಲೂಕು ಕಾರ್ಯನಿರತ‌ ಪತ್ರಕರ್ತರ ಸಂಘದಿಂದ‌ ‘ವಿಶ್ವ ಪರಿಸರ ದಿನಾಚರಣೆ’

0
98

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅರಣ್ಯ ಇಲಾಖೆ ಕುಂದಾಪುರ ಹಾಗೂ ಬಸ್ರೂರು ಶ್ರೀ ಶಾರದಾ ಕಾಲೇಜು ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಗೃತಿ ಕಾರ್ಯಕ್ರಮವು ಜೂನ್ 17ರಂದು ಬೆಳಿಗ್ಗೆ 9 ಗಂಟೆಗೆ ಬಸ್ರೂರಿನ ಶ್ರೀ ಶಾರದಾ ಕಾಲೇಜಿನಲ್ಲಿ ನಡೆಯಲಿದೆ.

Click Here

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ರಾಯಪ್ಪನಮಠ ವಹಿಸಲಿದ್ದು, ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರುಥ್ರನ್ ಪಿ., ಶ್ರೀ ಶಾರದಾ ಕಾಲೇಜಿನ ಸಂಚಾಲಕಿ ಅನುಪಮಾ ಎಸ್. ಶೆಟ್ಟಿ ಬಾಂಡ್ಯ ಹಾಗೂ ಪ್ರಾಂಶುಪಾಲ ಡಾ. ದಯಾನಂದ ಎನ್ ಭಾಗವಹಿಸಲಿದ್ದಾರೆ.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ (ಸುಜಿ ಕುರ್ಯ), ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ ಹಾಗೂ ಕಾರ್ಯದರ್ಶಿ ಟಿ. ಲೋಕೇಶ್ ಆಚಾರ್ಯ ಉಪಸ್ಥಿತರಿರಲಿದ್ದಾರೆ ಎಂದು ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಗಣೇಶ್ ಬೀಜಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Click Here

LEAVE A REPLY

Please enter your comment!
Please enter your name here